April 16, 2026
Thursday, April 16, 2026
spot_img

ಆಸೀಸ್​ಗೆ ಬಿಗ್ ಶಾಕ್: ಟಿ20 ವಿಶ್ವಕಪ್‌ ಆರಂಭಕ್ಕೂ ಮುನ್ನವೇ ವೇಗಿಗಳ ದಂಡು ಔಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದಿನಿಂದ ಟಿ20 ವಿಶ್ವಕಪ್‌ನ ರೋಚಕ ಕದನಕ್ಕೆ ಚಾಲನೆ ಸಿಗುತ್ತಿದೆ. ಒಟ್ಟು 20 ತಂಡಗಳು ಪ್ರಶಸ್ತಿಗಾಗಿ ಹೋರಾಟ ನಡೆಸಲು ಸಜ್ಜಾಗಿ ನಿಂತಿವೆ. ಆದರೆ, ವಿಶ್ವದ ಬಲಿಷ್ಠ ತಂಡಗಳಲ್ಲಿ ಒಂದಾದ ಆಸ್ಟ್ರೇಲಿಯಾಕ್ಕೆ ಟೂರ್ನಿ ಆರಂಭಕ್ಕೂ ಮುನ್ನವೇ ದೊಡ್ಡ ಆಘಾತ ಎದುರಾಗಿದೆ. ತಂಡದ ಬೆನ್ನೆಲುಬಾಗಿದ್ದ ಇಬ್ಬರು ಸ್ಟಾರ್ ವೇಗಿಗಳು ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದ ಅಧಿಕೃತವಾಗಿ ಹೊರಬಿದ್ದಿದ್ದಾರೆ.

ಆಸೀಸ್ ಪಡೆಯ ಪ್ರಮುಖ ಬೌಲಿಂಗ್ ಅಸ್ತ್ರ ಪ್ಯಾಟ್ ಕಮಿನ್ಸ್ ಬೆನ್ನು ನೋವಿನ ಸಮಸ್ಯೆಯಿಂದ ಚೇತರಿಸಿಕೊಳ್ಳದ ಕಾರಣ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

ಕಳೆದ ಕೆಲವು ತಿಂಗಳಿಂದ ಮಂಡಿರಜ್ಜು ಗಾಯದಿಂದ ಬಳಲುತ್ತಿರುವ ಹೇಝಲ್​ವುಡ್ ಸಂಪೂರ್ಣ ಫಿಟ್ ಆಗದ ಕಾರಣ ವಿಶ್ವಕಪ್‌ನಿಂದ ಹೊರಗುಳಿಯುವ ನಿರ್ಧಾರ ತೆಗೆದುಕೊಂಡಿದ್ದಾರೆ.

ಈಗಾಗಲೇ ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಪಡೆದಿರುವ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ ಕೂಡ ಈ ಬಾರಿ ತಂಡದಲ್ಲಿಲ್ಲ.

ವಿಶ್ವದ ಯಾವುದೇ ಬ್ಯಾಟಿಂಗ್ ಪಡೆಯನ್ನು ನಡುಗಿಸುವ ಶಕ್ತಿ ಹೊಂದಿದ್ದ ಕಮಿನ್ಸ್, ಹೇಝಲ್​ವುಡ್ ಮತ್ತು ಸ್ಟಾರ್ಕ್ ಇಲ್ಲದೆ ಆಸ್ಟ್ರೇಲಿಯಾ ಈ ಬಾರಿ ವಿಶ್ವಕಪ್‌ನಲ್ಲಿ ಕಣಕ್ಕಿಳಿಯುತ್ತಿರುವುದು ಕ್ರಿಕೆಟ್ ಅಭಿಮಾನಿಗಳಲ್ಲಿ ಕುತೂಹಲ ಮತ್ತು ಆತಂಕ ಎರಡನ್ನೂ ಮೂಡಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !