ಬೆಂಗಳೂರಿನ ಕಲಾಸಿಪಾಳ್ಯ ಬಿಎಂಟಿಸಿ ಬಸ್​ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಕಲಾಸಿಪಾಳ್ಯ ಬಿಎಂಟಿಸಿ ಬಸ್​ ನಿಲ್ದಾಣದಲ್ಲಿ ಸ್ಫೋಟಕ ಪತ್ತೆಯಾಗಿದೆ. ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಲಾಸಿಪಾಳ್ಯ ಬಸ್ ನಿಲ್ದಾಣದ ಶೌಚಾಲಯದ ಸಮೀಪ ಸ್ಫೋಟಕ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು, ಶ್ವಾನದಳ, ಬಾಂಬ್​ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸಿದೆ.

ಇನ್ನು ಸ್ಥಳಕ್ಕೆ ಡಿಸಿಪಿ ಎಸ್.ಗಿರೀಶ್​ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಸದ್ಯ ಬಸ್​ ನಿಲ್ದಾಣದಲ್ಲಿ ಪತ್ತೆಯಾದ ಸ್ಫೋಟಕವನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ಜಿಲೆಟಿನ್ ಕಡ್ಡಿ ಜೊತೆಗೆ ಕೆಲವು ಡಿಟೋನೆಟರ್​ಗಳು​ ಕೂಡ ಪತ್ತೆಯಾಗಿದ್ದು, ಈ ಸಂಬಂಧ ಸಂಬಂಧ ಕಲಾಸಿಪಾಳ್ಯ ಪೊಲೀಸರು ಎಫ್​​ಐಆರ್ ದಾಖಲಿಸಿಕೊಂಡು ಪರಿಶೀಲನೆ ನಡೆಸಲು ಮುಂದಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!