ಹೊಸದಿಗಂತ ಡಿಜಿಟಲ್ ಡೆಸ್ಕ್:
ತಾಂತ್ರಿಕ ದೋಷದಿಂದ ರಷ್ಯಾದ ವಿಮಾನ ಪೂರ್ವ ಅಮುರ್ ಪ್ರದೇಶದಲ್ಲಿ ಪತನಗೊಂಡಿದ್ದು, 48 ಮಂದಿ ಸಾವನ್ನಪ್ಪಿರುವುದಾಗಿ ವರದಿಗಳು ತಿಳಿಸಿವೆ.
ಸೈಬೀರಿಯಾ ಮೂಲದ ಅಂಗಾರ ಎಂಬ ವಿಮಾನಯಾನ ಸಂಸ್ಥೆಯಿಂದ ನಿರ್ವಹಿಸಲ್ಪಡುತ್ತಿದ್ದ AN-24 ಸಂಖ್ಯೆಯ ವಿಮಾನ ಚೀನಾದ ಗಡಿಯಲ್ಲಿರುವ ಅಮುರ್ ಪ್ರದೇಶದ ಟಿಂಡಾ ಪಟ್ಟಣದ ಬಳಿ ರಾಡಾರ್‌ನಿಂದ ಸಂಪರ್ಕ ಕಳೆದುಕೊಂಡಿತು. ಇದಾದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿರುವುದು ತಿಳಿದುಬಂದಿದೆ.
ಪ್ರಯಾಣಿಕ ವಿಮಾನದಲ್ಲಿ (ಪ್ಯಾಸೆಂಜರ್ ಫ್ಲೈಟ್) 6 ಮಕ್ಕಳು ಮತ್ತು ಆರು ಸಿಬ್ಬಂದಿ ಸೇರಿ 49 ಮಂದಿ ಇದ್ದರು ಅಂತ ಪ್ರಾದೇಶಿಕ ಗವರ್ನರ್ ವಾಸಿಲಿ ಓರ್ಲೋವ್ ಹೇಳಿದ್ದಾರೆ.