ಹೊಸದಿಗಂತ ಡಿಜಿಟಲ್ ಡೆಸ್ಕ್:
ವಸತಿ ಕಟ್ಟಡದ 12ನೇ ಮಹಡಿಯಿಂದ ಬಿದ್ದು 3 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಮೃತ ಬಾಲಕಿ ಪಾಲ್ಘರ್ ಜಿಲ್ಲೆಯ ವಸಾಯಿಯ ನಲಸೋಪರಾ ಪೂರ್ವದಲ್ಲಿ ವಾಸವಿರುವ ಎಲೆಕ್ಟ್ರಿಷಿಯನ್ ಅವರ ಪುತ್ರಿ. ನೈಗಾಂವ್ ಪೊಲೀಸ್ ಠಾಣೆಯಲ್ಲಿ ಸಲ್ಲಿಸಲಾದ ಪೊಲೀಸ್ ವರದಿಯ ಪ್ರಕಾರ, ಈ ಘಟನೆ ಜುಲೈ 22 ರಂದು ರಾತ್ರಿ 8.20 ರ ಸುಮಾರಿಗೆ ಸಂಭವಿಸಿದೆ.
ಕಟ್ಟಡದ ಅದೇ ಮಹಡಿಯಲ್ಲಿ ವಾಸವಾಗಿದ್ದ ಸಂಬಂಧಿಕರನ್ನು ಭೇಟಿ ಮಾಡಲು ಬಾಲಕಿ ತನ್ನ ಪೋಷಕರೊಂದಿಗೆ ಹೋಗಿದ್ದಳು. ಕುಟುಂಬ ಸದಸ್ಯರು ಮನೆಗೆ ಹಿಂದಿರುಗಲು ಸಿದ್ಧರಾದಾಗ ಬಾಲಕಿಯನ್ನು ಚಪ್ಪಲಿ ಸ್ಟ್ಯಾಂಡ್ ಮೇಲೆ ನಿಲ್ಲಿಸಲಾಗಿತ್ತು. ಆಗ ಪೋಷಕರು ಆಕೆಯ ಕಾಲಿಗೆ ಶೂ ಧರಿಸಲು ಸಹಾಯ ಮಾಡುತ್ತಿದ್ದರು. ಆಗ ಬಾಲಕಿ ಸಮತೋಲನ ಕಳೆದುಕೊಂಡು ಹಿಂದಕ್ಕೆ ಬಾಗಿದ್ದಾಳೆ. ಆಗ 12ನೇ ಮಹಡಿಯ ಕಾರಿಡಾರ್ನಿಂದ ಕೆಳಗೆ ಬಿದ್ದು ಗಂಭೀರ ಗಾಯವಾಗಿತ್ತು.
ತಕ್ಷಣ ಆಕೆಯನ್ನು ವಸಾಯಿಯಲ್ಲಿರುವ ಡಿಎಂ ಪೆಟಿಟ್ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ವೈದ್ಯರು ಆಕೆಯನ್ನು ಆಸ್ಪತ್ರೆಗೆ ತರುವಷ್ಟರಲ್ಲಿ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಹೇಳಿದ್ದಾರೆ.ಮಗುವಿನ ತಂದೆ ಈ ಘಟನೆ ಸಂಪೂರ್ಣವಾಗಿ ಆಕಸ್ಮಿಕವಾಗಿದ್ದು, ಇದಕ್ಕೆ ಯಾರನ್ನೂ ಹೊಣೆಗಾರರನ್ನಾಗಿ ಮಾಡಲ್ಲ ಎಂದು ಹೇಳಿದ್ದಾರೆ. ಯಾವುದೇ ದೂರು ದಾಖಲಾಗಿಲ್ಲ ಮತ್ತು ಇದರಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿಲ್ಲ.