ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಬ್ಯಾಟಿಂಗ್ ಮಾಡುವ ವೇಳೆ ಗಾಯಕ್ಕೆ ತುತ್ತಾಗಿದ್ದರು.
ಇದರಿಂದ ಪಂತ್ ನಡೆಯುವುದಕ್ಕೂ ಸಾಧ್ಯವಾಗದೆ ಮೈದಾನದ ಆಂಬುಲೆನ್ಸ್ ಸಹಾಯದಿಂದ ಮೈದಾನದಿಂದ ಹೊರ ಹೋಗಿದ್ದರು. ಆ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿಯನ್ನು ಬಿಸಿಸಿಐ ನೀಡಿತ್ತು.
ಈ ನಡುವೆ ರಿಷಭ್ ಪಂತ್ ಇಡೀ ಸರಣಿಯಿಂದಲೇ ಹೊರಬಿದ್ದಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು. ಆದರೆ ಇದೀಗ ಪಂತ್ ಗಾಯದ ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐ, ಈ ಪಂದ್ಯದಲ್ಲಿ ಅವರು ಮತ್ತೆ ಆಡುವುದನ್ನು ಖಚಿತಪಡಿಸಿದೆ. ಆದರೆ ಗಾಯದ ಕಾರಣದಿಂದಾಗಿ ಪಂತ್ ಬ್ಯಾಟಿಂಗ್ ಮಾತ್ರ ಮಾಡಲಿದ್ದು, ಧೃವ್ ಜುರೇಲ್ ವಿಕೆಟ್ ಕೀಪಿಂಗ್ ಮಾಡಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.