ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ಭಾರತ ತಂಡ 358 ರನ್‌ಗಳಿಗೆ ಆಲ್‌ಔಟ್ ಆಗಿದೆ.
ಟೀಂ ಇಂಡಿಯಾ ಪರ ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್ ಹಾಗೂ ರಿಷಭ್ ಪಂತ್ ಅರ್ಧಶತಕ ಸಿಡಿಸಿ ತಂಡವನ್ನು ಈ ಸ್ಕೋರ್ಗೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವಹಿಸಿದರು. ಇತ್ತ ಇಂಗ್ಲೆಂಡ್ ಪರ ಬೌಲಿಂಗ್‌ನಲ್ಲಿ ಮಿಂಚಿದ ನಾಯಕ ಬೆನ್ ಸ್ಟೋಕ್ಸ್ 5 ವಿಕೆಟ್ ಪಡೆದರು.
ಟಾಸ್ ಸೋತು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಕೆಲ್ ರಾಹುಲ್ 46, ಯಶಸ್ವಿ ಜೈಸ್ವಾಲ್ 58, ಶಾರ್ದೂಲ್ ಠಾಕೂರ್ 41 ಹಾಗೂ ರಿಷಭ್ ಪಂತ್ ಅವರ ಹೋರಾಟದ ಅರ್ಧಶತಕದ ಇನ್ನಿಂಗ್ಸ್ ನೆರವಿನಿಂದ ಭಾರತ ತಂಡ ಮೊದಲ ಇನ್ನಿಂಗ್ಸ್ನಲ್ಲಿ ಸ್ಪರ್ಧಾತ್ಮಕ ಮೊತ್ತ ದಾಖಲಿಸಿತು.