ಹೊಸದಿಗಂತ ವರದಿ,ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಕರಾವಳಿಯಾಲ್ಲಿ ಬಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಗುರುವಾರ ರೆಡ್ ಅಲರ್ಟ್ ಘೋಷಿಸಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಪ್ರಮಾಣದಲ್ಲಿ ಏರಿಕೆ ಕಾಣಿಸಿಕೊಂಡಿದ್ದು, ಶುಕ್ರವಾರವೂ ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ (ಜು.25 ) ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.
ಮೀನುಗಾರರಿಗೆ ಎಚ್ಚರಿಕೆ
ಭಾರತೀಯ ಹವಾಮಾನ ಇಲಾಖೆ ನೀಡಿದ ಸೂಚನೆಯಂತೆ ಜು.26ರ ವರೆಗೆ ಅರಬ್ಬಿ ಸಮುದ್ರದಲ್ಲಿ ಮಳೆ ಮತ್ತು ಭಾರೀ ಗಾಳಿ ಬೀಸುವುದರಿಂದ ಕಡಲು ಪ್ರಕ್ಷುಬ್ದವಾಗಿರುತ್ತದೆ ಈ ಕಾರಣದಿಂದ ನಾಡದೋಣಿ ಮೀನುಗಾರರು ಸೇರಿದಂತೆ ಯಾರು ಕೂಡ ಮೀನುಗಾರಿಕೆಗೆ ಸಮುದ್ರಕ್ಕೆ ತೆರಳದಂತೆ ಮೀನುಗಾರಿಕಾ ಇಲಾಖೆ ಸೂಚನೆ ನೀಡಿದೆ.