ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೂಪರ್‌ಸ್ಟಾರ್ ಕಮಲ್ ಹಾಸನ್ ತಮಿಳುನಾಡಿನಿಂದ ರಾಜ್ಯಸಭೆ ಸದಸ್ಯರಾಗಿ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು. ನಟ ತಮಿಳಿನಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದಾಗ ಸಹ ಸಂಸದರು ಚಪ್ಪಾಳೆ ತಟ್ಟಿ ಸಂಭ್ರಮಿಸಿದರು.
ಮಕ್ಕಳ್ ನೀಧಿ ಮೈಯ್ಯಂ (ಎಂಎನ್ಎಂ) ಪಕ್ಷದ ಸಂಸ್ಥಾಪಕರೂ ಆಗಿರುವ 69 ವರ್ಷದ ಕಮಲ್ ಹಾಸನ್ ಅವರಿಗೆ ರಾಜ್ಯಸಭೆಯ ಉಪಸಭಾಪತಿ ಹರಿವಂಶ್ ನಾರಾಯಣ ಸಿಂಗ್ ಅವರು ಪ್ರಮಾಣವಚನ ಬೋಧಿಸಿದರು.
‘ಥಗ್ ಲೈಫ್’ ಚಿತ್ರದ ನಟ ತಮ್ಮ ಮಹತ್ವದ ರಾಜಕೀಯ ಮೈಲಿಗಲ್ಲಿನ ಬಗ್ಗೆ ಸಂತೋಷ ವ್ಯಕ್ತಪಡಿಸಿದರು.ಸಂಸತ್ತಿನ ಹೊರಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ನನಗೆ ತುಂಬಾ ಹೆಮ್ಮೆ ಮತ್ತು ಗೌರವವಿದೆ’ ಎಂದು ಹೇಳಿದರು.
ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಪಕ್ಷ ತನ್ನ ಮಿತ್ರಪಕ್ಷವಾದ ಎಂಎನ್ಎಂ ಪಕ್ಷಕ್ಕೆ ಒಂದು ಸ್ಥಾನ ಬಿಟ್ಟುಕೊಟ್ಟಿತ್ತು. ಆ ಮೂಲಕ ರಾಜ್ಯಸಭೆಗೆ ಕಮಲ್ ಹಾಸನ್ ಅವರನ್ನು ಬೆಂಬಲಿಸಿತ್ತು.