ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಯೂರಿಯಾ ಗೊಬ್ಬರ ಅಭಾವ ಸೃಷ್ಟಿ ಆಗಿದೆ. ಹಲವು ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರ ಸಿಗದಿದ್ದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಪ್ಪಳ, ಗದಗ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಡಲಾಗಿದೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಕೇಂದ್ರ ರಸಗೊಬ್ಬರ ಸಚಿವ ಜೆ.ಪಿ.ನಡ್ಡಾಗೆ ಪತ್ರ ಬರೆದಿದ್ದು, ರಾಜ್ಯಕ್ಕೆ ಹಂಚಿಕೆಯಾದ ರಸಗೊಬ್ಬರ ಪ್ರಮಾಣವನ್ನು ಪೂರೈಕೆ ಮಾಡುವಂತೆ ಮನವಿ ಮಾಡಿದ್ದಾರೆ.
ಕೇಂದ್ರ ಸರ್ಕಾರವು 2025ರ ಖಾರಿಫ್ ಬೆಳೆಗೆ ರಾಜ್ಯಕ್ಕೆ 11,17,000 ಮೆಟ್ರಿಕ್ ಟನ್ ಯೂರಿಯಾ ಹಂಚಿಕೆ ಮಾಡಿದೆ. ಈವರೆಗೆ ಕೇವಲ 5,16,959 ಮೆಟ್ರಿಕ್ ಟನ್ ರಸಗೊಬ್ಬರ ಸರಬರಾಜು ಮಾಡಲಾಗಿದೆ. ಆದರೆ ಏಪ್ರಿಲ್ನಿಂದ ಜುಲೈವರೆಗೆ ರಾಜ್ಯಕ್ಕೆ 6,80,655 ಮೆಟ್ರಿಕ್ ಟನ್ ಯೂರಿಯಾದ ಅವಶ್ಯಕತೆ ಇದೆ. ಕೆಲ ರಸಗೊಬ್ಬರ ಕಂಪನಿಗಳು ಕೇಂದ್ರವು ಮಾಡಿದ ಹಂಚಿಕೆಯ ಪ್ರಕಾರ ಯೂರಿಯಾ ಗೊಬ್ಬರ ಪೂರೈಸಲು ಅಸಮರ್ಥತೆಯನ್ನು ವ್ಯಕ್ತಪಡಿಸಿವೆ ಎಂದು ಹೇಳಿದ್ದಾರೆ.