ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನ್ನು ಅನುಭವಿಸುವುದಕ್ಕೆ ಚುನಾವಣೆಯಲ್ಲಿ ನಡೆದ ವಂಚನೆಯೇ ಕಾರಣ ಎಂದಿದ್ದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಗೆ ತಿರುಗೇಟು ನೀಡಿರುವ ಚುನಾವಣಾ ಆಯೋಗ ದಾಖಲೆ ಸಮೇತ ರಾಹುಲ್ ಗಾಂಧಿಯ ಆರೋಪಕ್ಕೆ ಉತ್ತರ ನೀಡಿದೆ.
ಕರ್ನಾಟಕದ ಒಂದು ಸ್ಥಾನದಲ್ಲಿ ಮತಗಳನ್ನು ಕದಿಯಲು ಇಸಿಐ ಅವಕಾಶ ನೀಡಿದೆ ಎಂಬುದಕ್ಕೆ ತಮ್ಮ ಬಳಿ 100% ಪುರಾವೆಗಳಿವೆ. ಅಂತಹ ವಿಷಯ ಎಲ್ಲೆಡೆ ನಡೆಯುತ್ತಿದೆ ಎಂಬ ರಾಹುಲ್ ಗಾಂಧಿಯವರ ಹೇಳಿಕೆಯನ್ನು ಆಯೋಗ ಬಲವಾಗಿ ನಿರಾಕರಿಸಿತು. ಕಾಂಗ್ರೆಸ್ ಪಕ್ಷ ಮತ್ತು ಅದರ ಸೋತ ಅಭ್ಯರ್ಥಿಗಳು ಚುನಾವಣೆಯ ನಂತರ ಒಂದೇ ಒಂದು ಅರ್ಜಿಯನ್ನು ಸಲ್ಲಿಸಲಿಲ್ಲ ಎಂದು ಆಯೋಗ ಹೇಳಿದೆ.
ಕರ್ನಾಟಕದ ಚುನಾವಣಾ ಅಧಿಕಾರಿ ಕೂಡ ಈ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದು, ಎಲ್ಲಾ ಮತದಾರರ ಪಟ್ಟಿಯನ್ನು ಪಾರದರ್ಶಕವಾಗಿ ಸಿದ್ಧಪಡಿಸಲಾಗಿದೆ. ಆ ಪ್ರತಿಗಳನ್ನು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗದ ವಕ್ತಾರರು ಹೇಳಿದ್ದಾರೆ.