ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹದಾಯಿ ಯೋಜನೆಗೆ ಕೇಂದ್ರ ಅನುಮತಿ ನೀಡುವುದಿಲ್ಲ ಎಂಬುದು ಗೋವಾ ಸಿಎಂ ವೈಯಕ್ತಿಕ ಹೇಳಿಕೆ. ಇದು ಕೇಂದ್ರದ ಅಧಿಕೃತ ಹೇಳಿಕೆಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ ನೀಡಿದ್ದಾರೆ.
ಗೋವಾ ಸಿಎಂ ಪ್ರಮೋದ್ ಸಾವಂತ್ ಮಹದಾಯಿಗೆ ಕೇಂದ್ರ ಅನುಮತಿ ನೀಡಲ್ಲವೆಂದು ವಿಧಾನಸಭೆಯಲ್ಲಿ ಹೇಳಿಕೆ ನೀಡಿರುವುದು ಅವರ ವೈಯುಕ್ತಿಕ ಅನಿಸಿಕೆಯಾಗಿದೆ. ಈ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲವೆಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ನೆಲ, ಜಲ, ಭಾಷೆ ವಿಚಾರದಲ್ಲಿ ಯಾವತ್ತೂ ರಾಜಕೀಯ ಮಾಡುವುದಿಲ್ಲ. ಅದರಲ್ಲೂ ಕರ್ನಾಟಕದ ಕುಡಿಯುವ ನೀರಿನ ಸಮಸ್ಯೆಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತದೆ ಎಂದು ಭರವಸೆ ನೀಡಿದ್ದಾರೆ.