ಹೊಸದಿಗಂತ ಮಡಿಕೇರಿ:
ಭಾರೀ ಗಾಳಿ-ಮಳೆಗೆ ಮನೆಯ ಗೋಡೆ ಕುಸಿದು ಬಿದ್ದು ಕಾರ್ಮಿಕ ಮಹಿಳೆಯೊಬ್ಬರು ಸಾವಿಗೀಡಾದ ಘಟನೆ ಶನಿವಾರ ಮುಂಜಾನೆ ಸೋಮವಾರಪೇಟೆ ಸಮೀಪದ ಹಾನಗಲ್ಲು ಗ್ರಾಮದಲ್ಲಿ ನಡೆದಿದೆ.
ಮೂಲತಃ ಕಲಬುರಗಿ ಜಿಲ್ಲೆಯ ಅಫ್ಜಲ್’ಪುರದ ಸುಷ್ಮಾ(29) ಎಂಬವರೇ ಸಾವಿಗೀಡಾದವರು.
ಶನಿವಾರ ಬೆಳಗ್ಗೆ 5.30ರ ಸುಮಾರಿಗೆ ಈ ದುರ್ಘಟನೆ ನಡೆದಿದ್ದು, ಅದೃಷ್ಟವಶಾತ್ ಮನೆಯೊಳಗಿದ್ದ ಇಬ್ಬರು ಮಕ್ಕಳು ಹಾಗೂ ಸಹೋದರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಸಣ್ಣಪುಟ್ಟ ಗಾಯಗಳಾಗಿರುವ ಅವರನ್ನು ಸೋಮವಾರಪೇಟೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ಎರಡು ವರ್ಷದ ಹಿಂದೆ ಈ ಕುಟುಂಬ ಸೋಮವಾರಪೇಟೆಗೆ ಆಗಮಿಸಿ ಗ್ರಾಮದ ಗಣಪತಿ ದೇವಸ್ಥಾನ ಬಳಿಯ ಮನೆಯೊಂದರಲ್ಲಿ ನೆಲೆಸಿತ್ತೆನ್ನಲಾಗಿದ್ದು,ಮಣ್ಣಿನ ಗೋಡೆ ಕುಸಿದು ತಲೆ ಭಾಗಕ್ಕೆ ಬಿದ್ದ ಹಿನ್ನೆಲೆಯಲ್ಲಿ ಸುಷ್ಮಾ ಸ್ಥಳದಲ್ಲೇ ಸಾವಿಗೀಡಾಗಿರುವುದಾಗಿ ಹೇಳಲಾಗಿದೆ.