ಕಂಠಪೂರ್ತಿ ಕುಡಿದು ಶಾಲಾ ಆವರಣದಲ್ಲಿ ಮಲಗಿದ್ದ ಹೆಡ್‌ಮಾಸ್ಟರ್ ಕೊನೆಗೂ ಅಮಾನತು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಂಠಪೂರ್ತಿ ಕುಡಿದು ಶಾಲೆಗೆ ಬರುತ್ತಿದ್ದ ರಾಯಚೂರಿನ ಮಸ್ಕಿ ತಾಲೂಕಿನ ಗೋನಾಳ ಶಾಲಾ ಮುಖ್ಯೋಪಾಧ್ಯಾಯ ನಿಂಗಪ್ಪ ಅಮಾನತಾಗಿದ್ದಾರೆ.

ಈ ಹೆಡ್ ಮಾಸ್ಟರ್ ಕಂಠಪೂರ್ತಿ ಕುಡಿದು ಶಾಲಾ ಅಡುಗೆ ಕೋಣೆ ಬಾಗಿಲಲ್ಲೇ ಮಲಗಿದ್ದ. ಇದರಿಂದ ಎಚ್ಚೆತ್ತ ಶಿಕ್ಷಣ ಇಲಾಖೆ ಪರಿಶೀಲನೆ ನಡೆಸಿ‌ ಕ್ರಮ ಕೈಗೊಂಡಿದೆ.

‌ಕರ್ತವ್ಯ ಲೋಪ, ದುರ್ನಡತೆ ಹಾಗೂ ಬೇಜವಾಬ್ದಾರಿತನ ಹಿನ್ನೆಲೆ ಅಮಾನತುಗೊಳಿಸಿ ಸಿಂಧನೂರು ಕ್ಷೇತ್ರ ಶಿಕ್ಷಣಾಧಿಕಾರಿ ಬಸಲಿಂಗಪ್ಪ ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!