ಹೊಸದಿಗಂತ ಡಿಜಿಟಲ್ ಡೆಸ್ಕ್:
ಝಲಾವರ್ನಲ್ಲಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದು 7 ವಿದ್ಯಾರ್ಥಿಗಳು ಮೃತಪಟ್ಟ ಪ್ರಕರಣ ಸಂಬಂಧ ಐವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.
ಶುಕ್ರವಾರ ಬೆಳಗ್ಗೆ 8:30ಕ್ಕೆ ಶಾಲೆ ಶುರುವಾದ ವೇಳೆ ದುರಂತ ಸಂಭವಿಸಿದೆ. ಈ ಮೊದಲೇ ಶಿಥಿಲಾವಸ್ಥೆಯಲ್ಲಿದ್ದ ಶಾಲಾ ಕಟ್ಟಡ ಭಾರೀ ಮಳೆಯ ಕಾರಣ ಮೇಲ್ಛಾವಣಿ ಕುಸಿದು ಅವಘಡ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ. ಗಾಯಾಳು ವಿದ್ಯಾರ್ಥಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಸಂಬಂಧ ಮನೋಹರ್ಥಾನಾ ಬ್ಲಾಕ್ನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಇಂದು ರಜೆ ಘೋಷಿಸಲಾಗಿದೆ. ದುರಂತದ ಬಗ್ಗೆ ತನಿಖೆಗೆ ಆದೇಶಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ತಿಳಿಸಿದೆ.