ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕನ್ನಡತಿ ವೇದಾ ಕೃಷ್ಣಮೂರ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿಕ್ಕಮಗಳೂರು ಜಿಲ್ಲೆಯ ಕಡೂರು ಮೂಲದ ಭಾರತ ಮಹಿಳಾ ಕ್ರಿಕೆಟ್‌ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್ ವೇದಾ ಕೃಷ್ಣಮೂರ್ತಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಭಾವನೆಗಳನ್ನು ಹಂಚಿಕೊಂಡ ಅವರು, “ದೊಡ್ಡ ಕನಸುಗಳನ್ನು ಹೊಂದಿದ್ದ ಸಣ್ಣ ಪಟ್ಟಣದ ಹುಡುಗಿಯಾಗಿ ಆರಂಭಿಸಿ ಹೆಮ್ಮೆಯಿಂದ ಭಾರತ jerseys ಧರಿಸಿದ್ದೇನೆ. ಕ್ರಿಕೆಟ್ ನನಗೆ ಅನೇಕ ಪಾಠಗಳು, ನೆನಪುಗಳು ಹಾಗೂ ಜನರನ್ನು ನೀಡಿದೆ. ಈಗ ಆಟದಿಂದ ದೂರ ಸಾಗುವ ಸಮಯವಾಗಿದೆ, ಆದರೆ ಆಟದಿಂದ ಅಲ್ಲ,” ಎಂದು ಮನದಾಳದ ಮಾತುಗಳನ್ನು ಬರೆದಿದ್ದಾರೆ.

1992ರ ಅಕ್ಟೋಬರ್ 16ರಂದು ಚಿಕ್ಕಮಗಳೂರಿನ ಕಡೂರಿನಲ್ಲಿ ಜನಿಸಿದ ವೇದಾ, 2011ರಲ್ಲಿ ಇಂಗ್ಲೆಂಡ್ ವಿರುದ್ಧ ಏಕದಿನ ಕ್ರಿಕೆಟ್‌ಗೆ ಅಗ್ರೆಸೆಸಿಯಾದರು. ತಮ್ಮ 48 ಏಕದಿನ ಪಂದ್ಯಗಳ 41 ಇನ್ನಿಂಗ್ಸ್‌ಗಳಲ್ಲಿ ಒಟ್ಟು 829 ರನ್ ಗಳಿಸಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ 76 ಪಂದ್ಯಗಳಲ್ಲಿ 875 ರನ್ ಬಾರಿಸಿದ ಇವರು ಆಸ್ಟ್ರೇಲಿಯಾದ ಪ್ರಸಿದ್ಧ ಬಿಗ್ ಬ್ಯಾಷ್ ಲೀಗ್‌ನಲ್ಲಿ ಭಾಗವಹಿಸಿದ್ದ ಕೆಲವೇ ಭಾರತೀಯ ಆಟಗಾರ್ತಿಗಳಲ್ಲಿ ಒಬ್ಬರು.

ವೇದಾ, 2018ರಲ್ಲಿ ಇಂಗ್ಲೆಂಡ್ ವಿರುದ್ಧವೇ ಕೊನೆಯ ಏಕದಿನ ಪಂದ್ಯವಾಡಿದ್ದರು. ಟಿ20 ಕ್ರಿಕೆಟ್‌ನಲ್ಲಿ ಅವರು 2011ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಅಂಗಳ ಪ್ರವೇಶ ಮಾಡಿದ್ದರು. ಅಂತಿಮವಾಗಿ 2020ರಲ್ಲಿ ಆಸ್ಟ್ರೇಲಿಯಾದ ವಿರುದ್ಧ ನಡೆದ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯವೇ ಅವರ ಅಂತಿಮ ಅಂತರರಾಷ್ಟ್ರೀಯ ಪಂದ್ಯವಾಗಿತ್ತು.

ಮಾರ್ಚ್ 2024ರಲ್ಲಿ ದೆಹಲಿಯಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಆರ್‌ಸಿಬಿ ವಿರುದ್ಧ ಕೊನೆಯ ಟಿ20 ಪಂದ್ಯವಾಡಿದ ವೇದಾ, ಕರ್ನಾಟಕ ಹಾಗೂ ಗುಜರಾತ್ ಜೈಂಟ್ಸ್ ತಂಡಗಳ ಸದಸ್ಯೆಯಾಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Logged in as Ashika HD. Log out?

Please enter your comment!

error: Content is protected !!