ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 5 ಐರಾವತ ಕ್ಲಬ್ ಕ್ಲಾಸ್ 2.0 ವೋಲ್ವೋ ಬಸ್ಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ.
ಕೆಎಸ್ಆರ್ಟಿಸಿಗೆ 05 ನೂತನ ವೋಲ್ವೋ ಐರಾವತ ಕ್ಲಬ್ ಕ್ಲಾಸ್ 2.0 ಬಸ್ಗಳು ಬೆಂಗಳೂರು to ತಿರುಪತಿಗೆ ಒಂದು ಬಸ್, ಮಂಗಳೂರು to ಬೆಂಗಳೂರು ಎರಡು ಮತ್ತು ಮೈಸೂರು to ಮಂತ್ರಾಲಯಕ್ಕೆ ಎರಡು ಬಸ್ಗಳು ಸಂಚಾರ ನಡೆಸಲಿವೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನುಕಂಪದ ಆಧಾರದ ಮೇಲೆ ಕ.ರಾ.ಸಾ ಪೇದೆ ಹುದ್ದೆಗೆ ನೇಮಕಗೊಂಡ 45 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ, ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಯ ಕುಟುಂಬಕ್ಕೆ ರೂ.1 ಕೋಟಿ ರೂ ಪರಿಹಾರ ಮತ್ತು ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ 26 ಸಿಬ್ಬಂದಿಗಳ ಅವಲಂಬಿತರಿಗೆ ತಲಾ ರೂ.10 ಲಕ್ಷದಂತೆ 2.60 ಕೋಟಿ ರೂ ಪರಿಹಾರ ವಿತರಣೆ ಘೋಷಿಸಿದ್ದಾರೆ.