ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಕ್ತಿ ಯೋಜನೆಯಿಂದಾಗಿ ಮಹಿಳೆಯರ ಔದ್ಯೋಗಿಕ ದರವು ಬೆಂಗಳೂರಿನಲ್ಲಿ ಶೇ.23 ಮತ್ತು ಹುಬ್ಬಳ್ಳಿ – ಧಾರಾವಾಡದಲ್ಲಿ ಶೇ.21 ರಷ್ಟು ಏರಿಕೆಯಾಗಿರುವುದು ಅಧ್ಯಯನದಿಂದ ಬಹಿರಂಗವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಟ್ವೀಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಸಸ್ಟೈನೇಬಲ್ ಮೊಬಿಲಿಟಿ ನೆಟ್ವರ್ಕ್ ನಡೆಸಿದ ಸಮೀಕ್ಷಾ ವರದಿ ಪ್ರಕಾರ, ಶಕ್ತಿ ಯೋಜನೆಯಿಂದಾಗಿ ಮಹಿಳೆಯರ ಔದ್ಯೋಗಿಕ ದರವು ಬೆಂಗಳೂರಿನಲ್ಲಿ ಶೇ.23 ಮತ್ತು ಹುಬ್ಬಳ್ಳಿ – ಧಾರಾವಾಡದಲ್ಲಿ ಶೇ.21 ರಷ್ಟು ಏರಿಕೆಯಾಗಿರುವುದು ಅಧ್ಯಯನದಿಂದ ಬಹಿರಂಗವಾಗಿದೆ. ಮಹಿಳೆಯರಿಗೆ ಈ ಯೋಜನೆಯಿಂದಾಗಿ ಶೇ.30 ರಿಂದ ಶೇ.50 ರಷ್ಟು ಖರ್ಚು ಕಡಿಮೆಯಾಗುತ್ತಿರುವುದಾಗಿ ಸ್ವತಃ ಅವರೇ ಸಮೀಕ್ಷೆಯ ವೇಳೆ ಹೇಳಿಕೊಂಡಿದ್ದಾರೆ.
ಮಹಿಳೆಯರಿಗೆ ಆರ್ಥಿಕ ಬಲ ತುಂಬಿ, ಅವರನ್ನು ಸ್ವಾವಲಂಬಿಯಾಗಿಸುವ ಉದ್ದೇಶದ ಈ ಯೋಜನೆಯ ಬಗೆಗೆ ಕೇಳಿಬಂದ ಟೀಕೆಗಳು, ವ್ಯವಸ್ಥಿತ ಅಪಪ್ರಚಾರ ಎಲ್ಲವೂ ಸಾಧನೆಯ ಮುಂದೆ ಮಂಡಿಯೂರಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ವ್ಯಾಪಕ ಪ್ರಶಂಸೆಗೆ ಒಳಗಾಗಿರುವ ನಮ್ಮ ಗ್ಯಾರಂಟಿ ಯೋಜನೆಗಳು ಇಂದು ನಾಡಿನ ಜನರ ತಲಾದಾಯ ಹೆಚ್ಚಿಸಿ, ಅವರ ಬದುಕಿಗೆ ಆರ್ಥಿಕ ಭದ್ರತೆ ಕಲ್ಪಿಸಿದೆ. ನಮ್ಮ ಯೋಜನೆಯೊಂದು ನಿರೀಕ್ಷೆಗೂ ಮೀರಿ ಸಾಧನೆ ಮಾಡಿದರೆ ನನಗೆ ಅದಕ್ಕಿಂತ ಹೆಚ್ಚು ಸಂತಸದ ವಿಷಯ ಬೇರೆ ಇಲ್ಲ ಎಂದು ತಿಳಿಸಿದ್ದಾರೆ.