ನಟ ಪ್ರಥಮ್ ಗೆ ಬಂತು ಕಿಡಿಗೇಡಿಗಳಿಂದ ಡ್ಯಾಗ್ರರ್‌ ತೋರಿಸಿ ಜೀವ ಬೆದರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟ ಪ್ರಥಮ್ ಗೆ ಜೀವ ಬೆದರಿಕೆ ಬಂದಿದೆ. ದೇವಸ್ಥಾನಕ್ಕೆ ಹೋದಾಗ ಕಿಡಿಗೇಡಿಗಳು ಅವರನ್ನು ಕರೆದೊಯ್ದು ರಾಡ್ ನಿಂದ ಹಲ್ಲೆಗೆ ಯತ್ನಿಸಿ, ಜೀವ ಬಿದರಿಕೆ ಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಸಿನಿ ಚಿತ್ರೀಕರಣವೊಂದಕ್ಕೆ ತೆರಳೋದಕ್ಕೂ ಮುನ್ನ ದೊಡ್ಡಬಳ್ಳಾಪುರ ದೇವಸ್ಥಾನಕ್ಕೆ ಹೋಗಿದ್ದ ವೇಳೆ ದುಷ್ಕರ್ಮಿಗಳ ಗುಂಪೊಂದು ಪ್ರಥಮ್‌ಗೆ ಜೀವ ಬೆದರಿಕೆ ಒಡ್ಡಿದ್ದಾರೆ.

ದುಷ್ಕರ್ಮಿಗಳು ಡ್ಯಾಗ್ರರ್‌ ತೋರಿಸಿ ನಟನಿಗೆ ಜೀವಬೆದರಿಕೆ ಹಾಕಿದ್ದಾರೆ. ಪೂಜೆ ಮುಗಿಸಿ ಹೊರಟ ವೇಳೆ ಕಾರಿಗೆ ಅಡ್ಡಬಂದ ಕೆಲವರು ಪ್ರಥಮ್‌ನನ್ನ ಬಲವಂತವಾಗಿ ಕರೆದೊಯ್ದಿದ್ದಾರೆ.

ಈ ವೇಳೆ ನಮ್ ಬಾಸ್ ಬಗ್ಗೆ ಮಾತಾಡ್ತಿಯ ಅಂತ ಹಲ್ಲೆಗೆ ಯತ್ನಿಸಿ ಅವಾಚ್ಛವಾಗಿ ನಿಂದಿಸಿ ಬೆದರಿಸಿದ್ದಾರೆ. ಕೊನೆಗೆ ಅಲ್ಲಿಂದ ತಪ್ಪಿಸಿಕೊಂಡ ಬಂದ ಪ್ರಥಮ್ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿಕೆ ಬಾಬಾ ಅವರನ್ನ ಭೇಟಿಯಾಗಿ ಘಟನೆ ವಿವರಿಸಿದ್ದಾರೆ. ಬಳಿಕ ಎಸ್ಪಿ ಸಂಬಂಧಪಟ್ಟ ಠಾಣೆಗೆ ದೂರು ನೀಡುವಂತೆ ಸಲಹೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!