ಬೆನ್ ಸ್ಟೋಕ್ಸ್ ಶತಕದಾಟಕ್ಕೆ ಟೀಮ್ ಇಂಡಿಯಾ ಬೌಲರ್ ಗಳು ಸುಸ್ತು: ಇಂಗ್ಲೆಂಡ್‌ 311 ರನ್​ಗಳ ಮುನ್ನಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮ್ಯಾಂಚೆಸ್ಟರ್ ಟೆಸ್ಟ್​ನಲ್ಲಿ ಆತಿಥೇಯ ಇಂಗ್ಲೆಂಡ್‌ ತಂಡ ತನ್ನ ಮೊದಲ ಇನ್ನಿಂಗ್ಸ್​ನಲ್ಲಿ 669 ರನ್‌ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಆತಿಥೇಯರು ಭಾರತದ ವಿರುದ್ಧ 311 ರನ್‌ಗಳ ಮುನ್ನಡೆ ಸಾಧಿಸಿದ್ದಾರೆ.

ಅನುಭವಿ ಬ್ಯಾಟರ್ ಜೋ ರೂಟ್(150) ಹಾಗೂ ನಾಯಕ ಬೆನ್ ಸ್ಟೋಕ್ಸ್(141) ಬಾರಿಸಿದ ಆಕರ್ಷಕ ಶತಕಗಳ ನೆರವಿನಿಂದ ಆತಿಥೇಯ ಇಂಗ್ಲೆಂಡ್ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ 669 ರನ್ ಬಾರಿಸಿ ಸರ್ವಪತನ ಕಂಡಿದೆ.

2ನೇ ದಿನದಂತ್ಯಕ್ಕೆ 2 ವಿಕೆಟ್‌ಗೆ 215 ರನ್‌ ಗಳಿಸಿದ್ದ ಇಂಗ್ಲೆಂಡ್‌ ಶುಕ್ರವಾರವೂ ಅಧಿಪತ್ಯ ಸಾಧಿಸಿತು. ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 3ನೇ ದಿನದ ಅಂತ್ಯಕ್ಕ 7 ವಿಕೆಟ್‌ಗೆ 544 ರನ್‌ ಕಲೆಹಾಕಿತ್ತು.

ರಿಟೈರ್ ಹರ್ಟ್ ಆಗಿ ಪೆವಿಲಿಯನ್ ಸೇರಿದ್ದ ಬೆನ್ ಸ್ಟೋಕ್ಸ್, ಮೂರನೇ ದಿನದಾಟದ ಕೊನೆಯಲ್ಲಿ ಕ್ರಿಸ್ ವೋಕ್ಸ್ ವಿಕೆಟ್ ಪತನದ ಬಳಿಕ ಕ್ರೀಸ್‌ಗಿಳಿದಿದ್ದರು. ಏಳನೇ ವಿಕೆಟ್‌ಗೆ ಡಾಸೆನ್ ಜೊತೆಗೂಡಿ ಸ್ಟೋಕ್ಸ್ 35 ರನ್‌ಗಳ ಅಮೂಲ್ಯ ಜತೆಯಾಟ ನಿಭಾಯಿಸಿದರು.ಇದಾದ ಬಳಿಕ 9ನೇ ವಿಕೆಟ್‌ಗೆ ಬ್ರೈಡನ್ ಕಾರ್ಸ್ ಹಾಗೂ ಬೆನ್ ಸ್ಟೋಕ್ಸ್ ಜೋಡಿ ಭಾರತೀಯ ಬೌಲರ್‌ಗಳನ್ನು ಇನ್ನಿಲ್ಲದಂತೆ ಕಾಡಿದರು. ಈ ಜೋಡಿ ಬರೋಬ್ಬರಿ 95 ರನ್‌ಗಳ ಜತೆಯಾಟವಾಡುವ ಮೂಲಕ ಇಂಗ್ಲೆಂಡ್ ಮುನ್ನಡೆಯನ್ನು ಮುನ್ನೂರರ ಗಡಿ ದಾಟಿಸುವಲ್ಲಿ ಯಶಸ್ವಿಯಾಯಿತು.

ಭಾರತ ಎದುರಿನ ಮೊದಲ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಕಬಳಿಸಿ ಮಿಂಚಿದ್ದ ನಾಯಕ ಬೆನ್ ಸ್ಟೋಕ್ಸ್, ಬ್ಯಾಟಿಂಗ್‌ನಲ್ಲೂ ಶತಕ ಸಿಡಿಸುವ ಮೂಲಕ ಭಾರತೀಯರಿಗೆ ಶಾಕ್ ನೀಡಿದರು. 198 ಎಸೆತಗಳನ್ನು ಎದುರಿಸಿದ ಬೆನ್ ಸ್ಟೋಕ್ಸ್ 11 ಬೌಂಡರಿ ಹಾಗೂ ಮೂರು ಆಕರ್ಷಕ ಸಿಕ್ಸರ್‌ಗಳ ನೆರವಿನಿಂದ 141 ರನ್ ಸಿಡಿಸಿ ವಿಕೆಟ್ ಒಪ್ಪಿಸಿದರು.

ಭಾರತ ಪರ ರವೀಂದ್ರ ಜಡೇಜಾ 4 ವಿಕೆಟ್ ಕಬಳಿಸಿ ಯಶಸ್ವಿ ಬೌಲರ್ ಆಗಿ ಹೊರಹೊಮ್ಮಿದ್ದರೆ, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ ತಲಾ ಎರಡು ವಿಕೆಟ್ ಪಡೆದರು. ಇನ್ನು ಮೊಹಮ್ಮದ್ ಸಿರಾಜ್ ಹಾಗೂ ಅನ್ಶೂಲ್ ಕಂಬೋಜ್ ತಲಾ ಒಂದೊಂದು ವಿಕೆಟ್ ತಮ್ಮ ಬುಟ್ಟಿಗೆ ಹಾಕಿಕೊಂಡರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!