ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದ ಗಯಾದಲ್ಲಿ ಹೋಮ್ ಗಾರ್ಡ್ ನೇಮಕಾತಿಯ ದೈಹಿಕ ಪರೀಕ್ಷೆ ವೇಳೆ ಕುಸಿದು ಬಿದ್ದ ಯುವತಿಯನ್ನು ಆ್ಯಂಬುಲೆನ್ಸ್ ಮೂಲಕ ಆಸ್ರತ್ರೆಗೆ ಕರೆದೊಯ್ಯುವಾಗ ಸಾಮೂಹಿಕ ಅತ್ಯಾ*ರ ಎಸಗಿದ ಘಟನೆ ಬೆಳಕಿಗೆ ಬಂದಿದೆ.
ಬೋಧ್ ಗಯಾದಲ್ಲಿ ಹೋಮ್ ಗಾರ್ಡ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಇದಕ್ಕಾಗಿ ದೈಹಿಕ ಪರೀಕ್ಷೆಗೆ ಅಭ್ಯರ್ಥಿಗಳು ಹಾಜರಾಗಿದ್ದರು. ಓಟ, ದೈಹಿಕ ಸಾಮರ್ಥ್ಯ ಸೇರಿದಂತೆ ಹಲವು ಪರೀಕ್ಷೆಗಳು ನಡೆಸಲಾಗಿತ್ತು. ಈ ವೇಳೆ 26 ವರ್ಷದ ಯುವತಿ ಅಸ್ವಸ್ಥಗೊಂಡು ಕುಸಿದು ಬಿದಿದ್ದಾರೆ.
ಅಸ್ವಸ್ಥಗೊಂಡು ಕುಸಿದು ಬಿದ್ದ ಯುವತಿಗೆ ನೀರು ಕುಡಿಸಿ ಚೇತರಿಕೆಗೆ ಹಲವು ಪ್ರಯತ್ನಗಳು ನಡೆದಿತ್ತು. ಆದರೆ ಯುವತಿ ಚೇತರಿಸಿಕೊಳ್ಳದ ಕಾರಣ ಆ್ಯಂಬುಲೆನ್ಸ್ ಮೂಲಕ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಅಸ್ವಸ್ಥಳಾಗಿ ಆ್ಯಂಬುಲೆನ್ಸ್ ಮೂಲಕ ಸಾಗುತ್ತಿದ್ದ ಈಕೆಯ ಮೇಲೆ ಸಾಮೂಹಿಕವಾಗಿ ಅತ್ಯಾ*ರ ಎಸಲಾಗಿದೆ ಎಂದು ಯುವತಿ ಆರೋಪಿಸಿ ದೂರು ನೀಡಿದ್ದಾಳೆ. ಯುವತಿ ಆರೋಪದ ಬೆನ್ನಲ್ಲೇ ಪೊಲೀಸರು ಕಾರ್ಯಪ್ರವತ್ತರಾಗಿದ್ದಾರೆ. ಇಷ್ಟೇ ಅಲ್ಲ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ತೀವ್ರಗೊಳಿಸಿದ್ದಾರೆ.