ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಅಲಿಬಾಗ್ ಸಮೀಪದ ಅರಬ್ಬಿ ಸಮುದ್ರದಲ್ಲಿ ಭಾರೀ ಮಳೆ ಮತ್ತು ಪ್ರತಿಕೂಲ ಹವಾಮಾನ ಕಾರಣದಿಂದ ಮೀನುಗಾರರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಮಗುಚಿ ಮೂವರು ನಾಪತ್ತೆಯಾಗಿರುವ ಘಟನೆ ನಡೆದಿದೆ.
ಭಾರೀ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ದೋಣಿ ಮಗುಚಿದೆ. ಕೂಡಲೇ ಎಚ್ಚೆತ್ತ ಮೀನುಗಾರರು ನೀರಿಗೆ ಹಾರಿದ್ದಾರೆ. 8 ಮಂದಿ ಮೀನುಗಾರರ ಪೈಕಿ 5 ಮಂದಿ ಈಜಿಕೊಂಡು ದಡ ಸೇರಿದ್ದಾರೆ.
ಈ ನಡುವೆ ನಾಪತ್ತೆಯಾಗಿರುವ ಮೂವರು ಮೀನುಗಾರರಿಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ. ಸ್ಥಳೀಯ ಪೊಲೀಸರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಹಾಗೂ ಕಡಲ ತಟ ಭದ್ರತಾ ತಂಡಗಳು ಸಂಯುಕ್ತ ಕಾರ್ಯಾಚರಣೆಯಲ್ಲಿ ತೊಡಗಿವೆ. ಶೋಧ ಕಾರ್ಯವನ್ನು ವೇಗಗೊಳಿಸಲು ಡ್ರೋನ್‌ಗಳನ್ನು ಸಹ ಬಳಕೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.