ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ವಿವಿಧ ಇಲಾಖೆಗಳ 1,146.76 ಕೋಟಿ ಅನುದಾನದ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲು ಇಂದು ಸಾಧನಾ ಸಮಾವೇಶಕ್ಕೆ ಪಟ್ಟಣ ಸಮೀಪದ ತಿಮ್ಮದಾಸ್ ಹೋಟೆಲ್ ಬಳಿ ಬೃಹತ್ ವೇದಿಕೆ ಸಜ್ಜಾಗಿದೆ.
ಶಿವಪುರ ಧ್ಜಜಸತ್ಯಾಗ್ರಹ ಸೌಧದ ಮಾದರಿಯಲ್ಲಿ ಆಕರ್ಷಕ ವೇದಿಕೆ ನಿರ್ಮಾಣಗೊಂಡಿದ್ದು, ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಲು ಕೃಷಿ, ತೋಟಗಾರಿಕೆ, ಶಿಕ್ಷಣ, ಸಮಾಜ ಕಲ್ಯಾಣ, ಕೌಶಲ್ಯಾಭಿವೃದ್ದಿ ಸೇರಿದಂತೆ ವಿವಿಧ ಇಲಾಖೆಗಳ ವಸ್ತುಪ್ರದರ್ಶನ ಮಳಿಗೆಯನ್ನು ತೆರೆಯಲಾಗುವುದು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಸಚಿವರು, ಶಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.