September 30, 2026
Wednesday, September 30, 2026
spot_img

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಸದ್ಯಕ್ಕೆ ದರ ಏರಿಕೆ ಇಲ್ಲ ಎಂದ ಸಂಸದ ತೇಜಸ್ವಿ ಸೂರ್ಯ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: :

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ಸದ್ಯ ತಾತ್ಕಾಲಿಕ ಬ್ರೇಕ್​ ಬಿದ್ದಿದೆ. ಆ ಮೂಲಕ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್​​ ಸಿಕ್ಕಿದೆ.

ಸೋಮವಾರದಿಂದ ಆರಂಭವಾಗಲಿರುವ ಮೆಟ್ರೋ ಟಿಕೆಟ್ ದರ ಏರಿಕೆಯ ವಿರುದ್ಧ ನಿನ್ನೆ ಸಂಸದ ತೇಜಸ್ವಿ ಸೂರ್ಯ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮಾಹಿತಿ ನೀಡಿದ್ದರು. ಇಂದು ತಕ್ಷಣದ ಹಸ್ತಕ್ಷೇಪವನ್ನು ಕೋರಿ ಕೇಂದ್ರ ಗೃಹ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್​​​ ಅವರೊಂದಿಗೆ ಫೋನ್​​​ನಲ್ಲಿ ಮಾತನಾಡಿದ್ದಾರೆ. ಇದೀಗ ಮೆಟ್ರೋ ದರ ಏರಿಕೆ ಬಗ್ಗೆ ಮನೋಹರ್ ಲಾಲ್ ಖಟ್ಟರ್ ಜತೆ ದೂರವಾಣಿ ಸಂಭಾಷಣೆ ಮಾಡಿರುವೆ. ಫೆ.9ರಿಂದ ಮೆಟ್ರೋ ಟಿಕೆಟ್ ದರ ಹೆಚ್ಚಿಸದಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ.

ಮೆಟ್ರೋ ಪ್ರಯಾಣ ದರ ವ್ಯತ್ಯಾಸದ ಬಗ್ಗೆ ಕೇಂದ್ರದ ಗಮನ ಸೆಳೆದಿದ್ದೇನೆ. ಮೆಟ್ರೋ ಟಿಕೆಟ್ ದರ ಏರಿಕೆಯಿಂದ ಲಕ್ಷಾಂತರ ಜನರಿಗೆ ಹೊರೆಯಾಗಲಿದೆ. ಸಾರ್ವಜನಿಕ ಸಾರಿಗೆ ತಲುಪಲು ಕಷ್ಟವಾಗುತ್ತದೆ. ಹೀಗಾಗಿ ಪ್ರಸ್ತಾವಿತ ದರ ಏರಿಕೆ ತಾತ್ಕಾಲಿಕವಾಗಿ ತಡೆ ಹಿಡಿಯಲು ಸೂಚಿಸಿದ್ದು, ಸೋಮವಾರದಿಂದ ಮೆಟ್ರೋ ಟೆಕೆಟ್ ದರ ಹೆಚ್ಚಳವಾಗಲ್ಲ. ಪ್ರಯಾಣಿಕರ ಅನುಕೂಲಕ್ಕೆ ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಸೂರ್ಯ ಮಾಹಿತಿ ನೀಡಿದ್ದಾರೆ.

Must Read