ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಪರೇಷನ್ ಸಿಂಧೂರ್ ಸಂದರ್ಭದಲ್ಲಿ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ನಡೆದ ಪಾಕಿಸ್ತಾನಿ ಶೆಲ್ ದಾಳಿಯಲ್ಲಿ ಪೋಷಕರನ್ನು ಕಳೆದುಕೊಂಡ 22 ಮಕ್ಕಳನ್ನು ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ದತ್ತು ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ತಾರಿಕ್ ಹಮೀದ್ ಕರ್ರಾ, ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ಮುಖ್ಯಸ್ಥ ತಾರಿಕ್ ಹಮೀದ್ ಕರ್ರಾ ಅವರ ಪ್ರಕಾರ, ಪಾಕಿಸ್ತಾನದ ಶೆಲ್ ದಾಳಿಯಲ್ಲಿ ತಮ್ಮ ಹೆತ್ತವರಿಬ್ಬರನ್ನೂ ಅಥವಾ ಕುಟುಂಬದ ಏಕೈಕ ಜೀವನಾಧಾರವನ್ನು ಕಳೆದುಕೊಂಡ ಪೂಂಚ್‌ನ 22 ಮಕ್ಕಳ ಶೈಕ್ಷಣಿಕ ವೆಚ್ಚವನ್ನು ಗಾಂಧಿ ಭರಿಸಲಿದ್ದಾರೆ. ಈ ಮಕ್ಕಳು ಪದವಿ ಪಡೆಯುವವರೆಗೂ ಸಹಾಯ ಮುಂದುವರಿಯಲಿದೆ ಎಂದಿದ್ದಾರೆ.
ಪಾಕಿಸ್ತಾನಿ ಶೆಲ್ ದಾಳಿಯಲ್ಲಿ ಪೂಂಚ್ ಮತ್ತು ರಾಜೌರಿಯಲ್ಲಿ ಬಹಳಷ್ಟು ಜನ ಸಾವನ್ನಪ್ಪಿದ್ದಾರೆ, ಸಾಕಷ್ಟು ಆಸ್ತಿಪಾಸ್ತಿಗಳಿಗೆ ಹಾನಿ ಸಂಭವಿಸಿದೆ. ವಿನಾಶಕಾರಿ ಶೆಲ್ ದಾಳಿಯ ನಂತರ ರಾಹುಲ್ ಗಾಂಧಿ ಪೂಂಚ್‌ಗೆ ಭೇಟಿ ನೀಡಿ ದುಃಖಿತ ಕುಟುಂಬಗಳನ್ನು ಭೇಟಿ ಮಾಡಿದರು. ಅವರು ಒಬ್ಬರು ಅಥವಾ ಇಬ್ಬರೂ ಪೋಷಕರನ್ನು ಕಳೆದುಕೊಂಡ ಶಾಲಾ ಮಕ್ಕಳ ಪಟ್ಟಿಯನ್ನು ಸಿದ್ಧಪಡಿಸಲು ನಮಗೆ ಸೂಚಿಸಿದ್ದರು. ಅದಕ್ಕೆ ಅನುಗುಣವಾಗಿ ನಾವು ಅವರಿಗೆ ಪಟ್ಟಿಯನ್ನು ಸಲ್ಲಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.