ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಈ ಕುರಿತು ಮಾಹಿತಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿ ಲಕ್ಷ್ಮೀ ಹೆಬ್ಬಾಳಕರ್‌ , ಮುಂದಿನ ಅಕ್ಟೋಬರ್‌ನಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಗೌರ್ವನ್ಮೆಂಟ್‌ ಮಾಂಟೆಸ್ಸರಿ) ತರಗತಿಗಳು ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ಅವರೊಂದಿಗೆ ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಈ ಕುರಿತು ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಬೇಕಿದ್ದು, ಇನ್ನುಂದೆ ಅಂಗನವಾಡಿ ಕಾರ್ಯಕರ್ತೆಯರು, ಚುನಾವಣಾ ಕೆಲಸಗಳಿಂದ ವಿನಾಯಿತಿ ಪಡೆಯಲಿದ್ದಾರೆ. ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಶೀಘ್ರವೇ ಆರಂಭವಾಗಲಿದ್ದು, ಕಾರ್ಯಕರ್ತೆಯರ ಒತ್ತಡವನ್ನು ಇಳಿಸುವ ಸಲುವಾಗಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!