ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಸ್ಸಾಂನ ಪ್ರಸಿದ್ಧ ಕಾಮಾಕ್ಯ ದೇವಿ ದೇವಸ್ಥಾನಕ್ಕೆ ನಟ ದರ್ಶನ್ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದಾರೆ. ರಾಜ್ಯದಲ್ಲಿ ಡಿ-ಫ್ಯಾನ್ಸ್, ರಮ್ಯಾ ಮತ್ತು ಪ್ರಥಮ್ ವಿಷಯಗಳ ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲೇ ನಟ ದರ್ಶನ್ ಕಾಮಾಕ್ಯ ದೇವಿ ದರುಶನ ಪಡೆದಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲು ಸೇರಿದ್ದ ನಟ ದರ್ಶನ್ ಬಿಡುಗಡೆಗಾಗಿ ಪತ್ನಿ ಇದೇ ಕಾಮಾಕ್ಯ ದೇವಿ ದೇವಸ್ಥಾನಕ್ಕೆ ತೆರಳಿ ಹರಕೆ ಹೊತ್ತಿದ್ದರು. ಹೀಗಾಗಿ ಹರಕೆ ತೀರಿಸಲು ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ತೆರಳಿದ್ದಾರೆ.
ಕಳೆದ ವಾರ ಸುಪ್ರೀಂ ಕೋರ್ಟ್ನಲ್ಲಿ, ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ವಾದ-ಪ್ರತಿವಾದಗಳು ನಡೆದಿದ್ದು, ಒಂದು ವಾರದಲ್ಲಿ ತೀರ್ಪು ನೀಡುವುದಾಗಿ ಕೋರ್ಟ್ ತಿಳಿಸಿತ್ತು.