ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ನೂತನ ಲಗೇಜ್ ರೂಲ್ಸ್ ಜಾರಿ ಮಾಡಿದೆ ಎಂದು ಸಾಮಾಜಿಕ ಜಾಲತಾಣ ಮತ್ತು ಕೆಲ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ಸಂಬಂಧ ಕೆಎಸ್ಆರ್ಟಿಸಿ ಸ್ಪಷ್ಟೀಕರಣ ನೀಡಿದೆ. ಸಾಮಾಜಿಕ ಜಾಲತಾಣ ಮತ್ತು ಕೆಲವೊಂದು ಮಾಧ್ಯಮಗಳಲ್ಲಿ ಕೆಎಸ್ಆರ್ಟಿಸಿಯಲ್ಲಿ ನೂತನ ಲಗೇಜ್ ನಿಯಮ ಜಾರಿ ಎಂದು ಪ್ರಕಟವಾಗಿರುವುದು ಸತ್ಯಕ್ಕೆ ದೂರವಾಗಿರುತ್ತದೆ. ನಿಗಮ ಯಾವುದೇ ಹೊಸ ಲಗೆಜ್ ನಿಯಮಗಳನ್ನು ಜಾರಿಗೆ ತಂದಿಲ್ಲ ಎಂದು ಹೇಳಿದೆ.
“ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕ ಪ್ರಯಾಣಿಕರ ಲಗೇಜ್ / ಸರಕುಗಳನ್ನು ಸಾಗಿಸಲು ಹಿಂದಿನಿಂದಲೂ ವ್ಯವಸ್ಥೆ ಜಾರಿಯಿದ್ದು, ಅಂದರೆ ವಾಷಿಂಗ್ ಮಷಿನ್, ಫ್ರಿಡ್ಜ್, ಟ್ರಕ್ ಟಯರ್, ಅಲ್ಯೂಮಿನಿಯಂ ಪೈಪ್, ಕಬ್ಬಿಣದ ಪೈಪ್, ಪಾತ್ರೆ, ಬೆಕ್ಕು, ನಾಯಿ, ಮೊಲಗಳನ್ನು ಸಾಗಿಸಲು ಅವಕಾಶಗಳನ್ನು ದಿನಾಂಕ 05-11-1999 ರಿಂದಲೇ ನಿಗಮದಲ್ಲಿ ಜಾರಿಯಲ್ಲಿರುತ್ತದೆ. ಇತ್ತೀಚೆಗೆ ಯಾವುದೇ ಹೊಸ ಲಗೇಜ್ ನಿಯಮ / ಸುತ್ತೋಲೆಯನ್ನು ನಿಗಮದಲ್ಲಿ ಜಾರಿಗೆ ತಂದಿರುವುದಿಲ್ಲ ಎಂಬುದನ್ನು ತಮ್ಮ ಆದ್ಯ ಗಮನಕ್ಕೆ ತರಲಾಗಿದೆ” ಎಂದು ಪತ್ರಿಕಾ ಪ್ರಕರಟಣೆಯಲ್ಲಿ ತಿಳಿಸಿದೆ.