ಹೊಸ ದಿಗಂತ ಡಿಜಿಟಲ್ ಡೆಸ್ಕ್: :
U19 ವಿಶ್ವಕಪ್ನಲ್ಲಿ ಇಂಗ್ಲೆಂಡ್ ತಂಡ ವಿರುದ್ಧ ಗೆದ್ದ ಭಾರತ ಯುವ ಪಡೆಯ ಸಾಧನೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿತ್ತು. ವಿಶ್ವ ಕ್ರಿಕೆಟ್ ಮುಂದೆ ಭಾರತದ ಕೀರ್ತಿ ಪತಾಕೆಯನ್ನು ಮತ್ತೊಮ್ಮೆ ಹಾರಿಸಿದ ಯುವ ಟೀಂ ಇಂಡಿಯಾಕ್ಕೆ ಬಿಸಿಸಿಐ ಭರ್ಜರಿ ಬಹುಮಾನ ಘೋಷಿಸಿದೆ.
ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ದಾಖಲೆಯ 411 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್ 311 ರನ್ಗಳಿಗೆ ಆಲೌಟ್ ಆಗಿ 100 ರನ್ಗಳಿಂದ ಸೋಲೊಪ್ಪಿಕೊಂಡಿತು. ಆದ್ರೆ ಚಾಂಪಿಯನ್ ಭಾರತಕ್ಕೆ ಐಸಿಸಿ ಕಡೆಯಿಂದ ಟ್ರೋಫಿ ಹಾಗೂ ಪದಕ ಸಿಕ್ಕಿತ್ತು. ಆದರೆ ನಗದು ರೂಪದಲ್ಲಿ ಯಾವುದೇ ಬಹುಮಾನ ಸಿಕ್ಕಿರಲಿಲ್ಲ. ಹೀಗಾಗಿ ಟ್ರೋಫಿ ಮತ್ತು ಪದಕದೊಂದಿಗೆ ಟೀಂ ಇಂಡಿಯಾ ಆಟಗಾರರು ತವರಿಗೆ ಮರಳುತ್ತಿದ್ದಾರೆ. ಇದೀಗ ಬಿಸಿಸಿಐ ಚಾಂಪಿಯನ್ ಭಾರತ ತಂಡಕ್ಕೆ ಭರ್ಜರಿ ನಗದು ಬಹುಮಾನ ಘೋಷಿಸಿದೆ.
ಭಾರತ ಯುವ ಪಡೆಗೆ ಬಿಸಿಸಿಐ 7.5 ಕೋಟಿ ರೂ. ನಗದು ಬಹುಮಾನ ಘೋಷಿಸಿದೆ. ಈ ಬಹುಮಾನದ ಮೊತ್ತವನ್ನು ಈ ಪಂದ್ಯಾವಳಿಯಲ್ಲಿ ತಂಡದ ಭಾಗವಾಗಿದ್ದ ಆಟಗಾರರು, ಕೋಚಿಂಗ್ ಸಿಬ್ಬಂದಿಗಳಿಗೆ ಹಂಚಲಾಗುವುದು.



