ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಕ್ರವರ್ತಿ ಅಶೋಕನ ಶಿಲಾಶಾಸನದಿಂದ ವಿಶ್ವ ಪ್ರಸಿದ್ಧಿ ಪಡೆದಿರುವ ರಾಯಚೂರಿನ ಮಸ್ಕಿ ಮತ್ತೊಂದು ಐತಿಹಾಸಿಕ ಕುರುಹಿಗೆ ಸಾಕ್ಷಿಯಾಗಿದೆ.
4 ಸಾವಿರ ವರ್ಷಗಳ ಹಿಂದೆ ಇಲ್ಲಿ ಜನವಸತಿ ಇದ್ದ ಬಗ್ಗೆ ಹಲವು ವಿಷಯಗಳು ಉತ್ಖನನದಲ್ಲಿ ಬೆಳಕಿಗೆ ಬಂದಿದೆ. ಮೂರು ದೇಶಗಳ ಸಂಶೋಧಕರ ತಂಡ ಹೊಸ ವಿಚಾರಗಳನ್ನ ಹೊರತಂದಿದೆ.
ಅಶೋಕನ ಪೂರ್ವದಲ್ಲಿ ಸಾಕಷ್ಟು ವರ್ಷಗಳ ಹಿಂದೆಯೇ ಜನವಸತಿ ಇದ್ದ ಬಗ್ಗೆ ಸಂಶೋಧಕರು ಬೆಳಕು ಚೆಲ್ಲಿದ್ದಾರೆ. ಅಮೆರಿಕಾ, ಕೆನಡಾ ಹಾಗೂ ಭಾರತದ 20 ಜನ ಸಂಶೋಧಕರ ತಂಡ ಪಟ್ಟಣದ ಮಲ್ಲಿಕಾರ್ಜುನ ಬೆಟ್ಟ, ಬಯಲು ಆಂಜನೇಯ ದೇವಸ್ಥಾನ ಸೇರಿ ತಾಲೂಕಿನ ಹಲವೆಡೆ ಉತ್ಖನನ ನಡೆಸಿದೆ. ಉತ್ಖನನ ವೇಳೆ ಪ್ರಾಚೀನ ಕಾಲದಲ್ಲಿ ಬಳಕೆಯಲ್ಲಿದ್ದ ಪ್ರಾಚ್ಯ ಪಳಿಯುಳಿಕೆಗಳ ಸಂಗ್ರಹ ಮಾಡಲಾಗಿದೆ.