ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಇತಿಹಾಸದಲ್ಲೇ ಅತಿದೊಡ್ಡ ಸೈಬರ್ ವಂಚನೆ ಪ್ರಕರಣವೊಂದು ಬೆಂಗಳೂರಿನ ವೈಟ್ಫೀಲ್ಡ್ನಲ್ಲಿ ಬೆಳಕಿಗೆ ಬಂದಿದೆ.
ದೇಶದ ಪ್ರತಿಷ್ಠಿತ ಕ್ರಿಪ್ಟೋ ಕರೆನ್ಸಿ ಕಂಪನಿಯಾದ ನೆಬಿಲೊ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ನ ಸರ್ವರ್ ಹ್ಯಾಕ್ ಮಾಡಿ, ಸೈಬರ್ ಖದೀಮರು 378 ಕೋಟಿ ರೂಪಾಯಿ ಕಳವು ಮಾಡಿದ್ದಾರೆ. ಪ್ರಕರಣ ಸಂಬಂಧ ವೈಟ್ಫೀಲ್ಡ್ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ ಸಂಬಂಧ ನೆಬಿಲೊ ಟೆಕ್ನಾಲಜೀಸ್ ಕಂಪನಿ ನೌಕರ ರಾಹುಲ್ ಅಗರ್ವಾಲ್ ಎಂಬುವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಸೈಬರ್ ಕ್ರೈಂ ಪೊಲೀಸರು ರಾಹುಲ್ನ ಲ್ಯಾಪ್ಟಾಪ್ ವಶಕ್ಕೆ ಪಡೆದು ತಪಾಸಣೆ ನಡೆಸುತ್ತಿದ್ದಾರೆ.