ಭಾರತದ ಮೇಲೆ ಟ್ರಂಪ್ ತೆರಿಗೆ ಸಮರ: ಆ.1 ರಿಂದ ಆಮದಾಗುವ ವಸ್ತುಗಳ ಮೇಲೆ 25% ತೆರಿಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಭಾರತದ ಮೇಲೆ ತೆರಿಗೆ ಸಮರ ಆರಂಭಿಸಿದ್ದಾರೆ. ಆಗಸ್ಟ್‌ 1 ರಿಂದ ಭಾರತದಿಂದ ಆಮದಾಗುವ ವಸ್ತುಗಳ ಮೇಲೆ 25% ತೆರಿಗೆ ಘೋಷಿಸಿದ್ದಾರೆ.

ಈ ಸಂಬಂಧ ಟ್ರೂಥ್‌ ಸಾಮಾಜಿಕ ಜಾಲತಾಣದಲ್ಲಿ ಭಾರತದ ಮೇಲೆ ತೆರಿಗೆ ವಿಧಿಸಲಾಗುವುದು ಎಂದು ಪ್ರಕಟಿಸಿದ್ದಾರೆ. ಭಾರತ ನಮ್ಮ ಸ್ನೇಹಿತನಾಗಿದ್ದರೂ, ನಾವು ವರ್ಷಗಳಲ್ಲಿ ಅವರೊಂದಿಗೆ ತುಲನಾತ್ಮಕವಾಗಿ ಕಡಿಮೆ ವ್ಯವಹಾರ ಮಾಡಿದ್ದೇವೆ ಎಂಬುದನ್ನು ನೆನಪಿಡಿ. ಎಲ್ಲರೂ ರಷ್ಯಾ ಉಕ್ರೇನ್‌ನಲ್ಲಿ ಮಾಡುತ್ತಿರುವ ಯುದ್ಧವನ್ನು ನಿಲ್ಲಿಸಬೇಕೆಂದು ಹೇಳುತ್ತಿರುವ ಸಮಯದಲ್ಲಿ ಭಾರತ ಯಾವಗಲೂ ತಮ್ಮ ಮಿಲಿಟರಿ ಉಪಕರಣಗಳ ಬಹುಪಾಲು ರಷ್ಯಾದಿಂದ ಖರೀದಿಸಿದೆ ಮತ್ತು ಚೀನಾದೊಂದಿಗೆ ರಷ್ಯಾದಿಂದ ಹೆಚ್ಚು ಇಂಧನ ಖರೀದಿ ಮಾಡುತ್ತಿದೆ. ಈ ಕಾರಣಕ್ಕೆ ಭಾರತದಿಂದ ಆಮದಾಗುವ ವಸ್ತುಗಳ ಮೇಲೆ 25% ತೆರಿಗೆ ವಿಧಿಸಲಾಗುತ್ತದೆ ಎಂದು ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!