ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಲೆಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ನ್ಯಾಯಾಲಯ ಬಿಜೆಪಿಯ ಮಾಜಿ ಸಂಸದೆ ಪ್ರಜ್ಞಾ ಠಾಕೂರ್ ಸೇರಿ ಎಲ್ಲಾ ಏಳು ಮಂದಿಯನ್ನು ಖುಲಾಸೆಗೊಳಿಸಲಾಗಿದೆ.
ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಮಾಲೆಗಾಂವ್ ನಗರದಲ್ಲಿ 17 ವರ್ಷಗಳ ಹಿಂದೆ ನಡೆದ, ಬಾಂಬ್ ಸ್ಫೋಟದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ನ್ಯಾಯಾಲಯವು ಗುರುವಾರ ಪ್ರಕರಣದ ತೀರ್ಪು ಪ್ರಕಟಿಸಿದೆ.
ಬಿಜೆಪಿಯ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ (55) ಮತ್ತು ಸೇವೆ ಸಲ್ಲಿಸುತ್ತಿರುವ ಸೇನಾ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ (53) ಸೇರಿದಂತೆ ಹಲವು ಆರೋಪಿಗಳ ಹೆಸರು ಈ ಪ್ರಕರಣದಲ್ಲಿತ್ತು. ಎಲ್ಲಾ ಏಳು ಮಂದಿಯನ್ನು ಖುಲಾಸೆಗೊಳಿಸಲಾಗಿದೆ.
ಸೆಪ್ಟೆಂಬರ್ 29, 2008 ರಂದು ರಂಜಾನ್ ತಿಂಗಳಿನಲ್ಲಿ ಮಾಲೆಗಾಂವ್‌ನ ಮುಸ್ಲಿಂ ಏರಿಯಾದಲ್ಲಿ ಈ ಪ್ರಕರಣ ಸಂಭವಿಸಿತ್ತು , 2008 ರ ಮಾಲೆಗಾಂವ್ ಸ್ಫೋಟದಲ್ಲಿ ಆರು ಜನರು ಸಾವನ್ನಪ್ಪಿದರು ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.