ಕೇದಾರನಾಥ ಮಾರ್ಗದಲ್ಲಿ ಭಾರೀ ಮಳೆಯಿಂದ ಭೂಕುಸಿತ: 800 ಯಾತ್ರಿಕರ ರಕ್ಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇದಾರನಾಥ ಮಾರ್ಗದಲ್ಲಿ ಭಾರೀ ಮಳೆಯಿಂದಾಗಿ ಉಂಟಾದ ಭೂಕುಸಿತದಲ್ಲಿ ಸಿಲುಕಿಕೊಂಡಿದ್ದ ಸುಮಾರು 800 ಯಾತ್ರಿಕರನ್ನು ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ಪೊಲೀಸ್ ತಂಡಗಳು ರಕ್ಷಿಸಿವೆ.

ಕೇದಾರನಾಥ ಯಾತ್ರಾ ಮಾರ್ಗದಲ್ಲಿ ಭಾರೀ ಮಳೆಯಿಂದಾಗಿ ರುದ್ರಪ್ರಯಾಗ-ಕೇದಾರನಾಥ ಸಂಪರ್ಕಿಸುವ 107ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದೆ.

ರುದ್ರಪ್ರಯಾಗ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ಎನ್.ಕೆ.ರಾಜ್‌ವಾರ್ ಅವರ ಮಾಹಿತಿ ಪ್ರಕಾರ, ಗೌರಿಕುಂಡ್‌ನಿಂದ ಸುಮಾರು 1.5 ಕಿಮೀ ದೂರದಲ್ಲಿರುವ ಮುಂಕಟಿಯಾ ಸ್ಲೈಡಿಂಗ್ ಝೋನ್ ಬಳಿ ಭೂಕುಸಿತ ಸಂಭವಿಸಿದೆ. ಈ ವೇಳೆ ಸಾವಿರಾರು ಯಾತ್ರಿಕರು ಸಿಲುಕಿಕೊಂಡಿದ್ದರು. ಕೂಡಲೇ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ತಂಡದ ಸಿಬ್ಬಂದಿ ಕಾರ್ಯಪ್ರವೃತ್ತರಾಗಿ, ಯಾತ್ರಿಕರನ್ನು ಸುರಕ್ಷಿತವಾಗಿ ಸೋನ್‌ಪ್ರಯಾಗ್‌ಗೆ ಸ್ಥಳಾಂತರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!