April 13, 2026
Monday, April 13, 2026
spot_img

ನನಸಾಗಲಿದೆ ಕರಾವಳಿ ಜನತೆಯ ಬಹುದಿನಗಳ ಕನಸು: ಶೀಘ್ರದಲ್ಲೇ ಬೆಂಗಳೂರು-ಮಂಗಳೂರು ‘ವಂದೇ ಭಾರತ್’ ರೈಲು!

ಹೊಸ ದಿಗಂತ ಡಿಜಿಟಲ್ ಡೆಸ್ಕ್: :

ಶೀಘ್ರದಲ್ಲಿ ಬೆಂಗಳೂರು-ಮಂಗಳೂರು ಕರಾವಳಿ ಭಾಗದ ಮಾರ್ಗದಲ್ಲಿ ಎರಡು ವಂದೇ ಭಾರತ್ ರೈಲು ಸೇವೆ ಆರಂಭಿಸಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಿರಾಡಿ ಘಾಟ್ ಭಾಗದ ಮಾರ್ಗದಲ್ಲಿ ವಿದ್ಯುದೀಕರಣ ಪೂರ್ಣವಾಗಿದೆ. ಇನ್ನೂ, ಹಲವು ಸುರಕ್ಷತಾ ಪರೀಕ್ಷೆಗಳು ನಡೆಯಲಿದ್ದು, ಇದಾದ ಬಳಿಕ ಸಂಸದರು, ಜನಪ್ರತಿನಿಧಿಗಳು ಸೇರಿ ಎಲ್ಲರಿಂದ ಸಲಹೆ ಪಡೆದು ವಂದೇ ಭಾರತ್ ರೈಲು ಸೇವೆಯ ವೇಳಾಪಟ್ಟಿಯನ್ನು ಸಿದ್ಧಪಡಿಸಲಾಗುವುದು ಎಂದುತಿಳಿಸಿದರು.

ಮಂಗಳೂರು, ಉಡುಪಿ ಮುಖೇನ ಕಾರವಾರದವರೆಗೆ ವಂದೇ ಭಾರತ್ ರೈಲು ಸಂಚರಿಸಲಿದೆ. ಕರಾವಳಿ ಕರ್ನಾಟಕದ ಅತಿ ಉದ್ದದ ಮಾರ್ಗವನ್ನು ಸಂಪರ್ಕಿಸುವ ಕಾರಣ ಎರಡು ವಂದೇ ಭಾರತ್ ರೈಲು ಸೇವೆಯನ್ನು ಆರಂಭಿಸಲಾಗುವುದು.‌ ಒಂದು ಕೋಸ್ಟಲ್ ನಿಂದ ಬೆಂಗಳೂರು, ಮತ್ತೊಂದು ಬೆಂಗಳೂರಿನಿಂದ ಕೋಸ್ಟಲ್ ಜಿಲ್ಲೆಗಳಿಗೆ ವಂದೇ ಭಾರತ್ ರೈಲು ಓಡಾಡಲಿದೆ ಎಂದು ಸಚಿವರು ಮಾಹಿತಿ ನೀಡಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !