ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾರ್ಮಿಕರಿಗೆ ಹತ್ತು ಗಂಟೆಗಳ ಕಾಲ ಕೆಲಸ ಮಾಡಿ ಎಂದು ಒತ್ತಡ ಹೇರಬೇಡಿ ಎಂದು ಕಂಪನಿಗಳಿಗೆ ಸರ್ಕಾರ ಖಡಕ್ ಎಚ್ಚರಿಕೆ ಕೊಟ್ಟಿದೆ.
ಕಾರ್ಮಿಕರ ಕೆಲಸದ ಅವಧಿಯನ್ನು 8 ರಿಂದ 10 ಗಂಟೆ ವಿಸ್ತರಣೆ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ ಪ್ರಸ್ತಾವನೆ ಕಳುಹಿಸಿತ್ತು. ಈ ಪ್ರಸ್ತಾವನೆಗೆ ಕೆಲಸದ ಕರ್ನಾಟಕದಲ್ಲಿ ಕಾರ್ಮಿಕ ಸಂಘಟನೆಗಳು ಸಾಕಷ್ಟು ವಿರೋಧ ವ್ಯಕ್ತಪಡಿಸಿವೆ.
ಇದರ ಬೆನ್ನಲ್ಲೇ ಕರ್ನಾಟಕ ಕಾರ್ಮಿಕ ಇಲಾಖೆಯು ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಕಾರ್ಮಿಕ ಸಂಘಟನೆಗಳು, ಕೈಗಾರಿಕೋದ್ಯಮಿಗಳು, ಐಟಿ ಉದ್ಯಮಿಗಳ ಜೊತೆ ಹಲವು ಬಾರಿ ಸಭೆ ನಡೆಸಿದೆ.
ಕೇಂದ್ರದ ಪ್ರಸ್ತಾವಕ್ಕೆ ಕಾರ್ಮಿಕ ಸಂಘಟನೆಗಳು ಸಾಕಷ್ಟು ವಿರೋಧ ವ್ಯಕ್ತಪಡಿಸಿದರೆ, ಕೈಗಾರಿಕೋದ್ಯಮಿಗಳು ವಿರೋಧ ವ್ಯಕ್ತಪಡಿಸಿಲ್ಲ. ಇದೀಗ ರಾಜ್ಯ ಕಾರ್ಮಿಕ ಇಲಾಖೆಯು ಕಾರ್ಮಿಕರ ಹಿತದೃಷ್ಟಿಯಿಂದ ಒಂದು ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ.
ಕೇಂದ್ರ ಸರ್ಕಾರದ ಕೆಲಸದ ಅವಧಿ ವಿಸ್ತರಣೆ ಪ್ರಸ್ತಾವನೆಗೆ ಯಾವುದೇ ಪರ-ವಿರೋಧ ವ್ಯಕ್ತಪಡಿಸದೆ ಇರುವ ಕಾರ್ಮಿಕ ಇಲಾಖೆ, ಕಾರ್ಮಿಕರಿಗೆ ಒತ್ತಡ ಹಾಕಿ 10 ಗಂಟೆಗಳ ಕಾಲ ಕೆಲಸ ಮಾಡದಂತೆ ಕಂಪನಿಗಳಿಗೆ ಎಚ್ಚರಿಕೆ ಕೊಟ್ಟಿದೆ.