ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಜಯ್ ದೇವರಕೊಂಡ ಅಭಿನಯದ ‘ಕಿಂಗ್ಡಮ್’ ಸಿನಿಮಾ ಮೊದಲ ದಿನವೇ ಬಾಕ್ಸ್‌ಆಫೀಸ್‌ನಲ್ಲಿ ಭರ್ಜರಿ ಆರಂಭ ಪಡೆದುಕೊಂಡಿದ್ದು, ದೇಶದಾದ್ಯಂತ ಪಾಸಿಟಿವ್ ಪ್ರತಿಕ್ರಿಯೆ ಗಳಿಸುತ್ತಿದೆ. ಖ್ಯಾತ ನಿರ್ದೇಶಕ ಗೌತಮಿ ತಿನ್ನನುರಿ ನಿರ್ದೇಶನದಲ್ಲಿ ಮೂಡಿಬಂದ ಈ ಸಿನಿಮಾ, ಪ್ರೇಕ್ಷಕರ ಮನಸ್ಸನ್ನೂ ಗೆದ್ದಿದೆ.
‘ಲೈಗರ್’ ನಂತರ ವಿಜಯ್ ದೇವರಕೊಂಡ ಅವರು ಮತ್ತೆ ಮಾಸ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದು, ‘ಕಿಂಗ್ಡಮ್’ ಚಿತ್ರದಲ್ಲಿ ಅವರು ತಮ್ಮ ಹೊಸ ಶೈಲಿಯ ಅಭಿನಯದಿಂದ ಮಿಂಚಿದ್ದಾರೆ. ಈ ಸಿನಿಮಾದಲ್ಲಿ ಕಾನ್ಸ್‌ಟೇಬಲ್ ಪಾತ್ರದಿಂದ ಆರಂಭಿಸಿ, ನಂತರ ಅವರ ಸ್ಪೈ ಆಗುವ ಮತ್ತು ತಮ್ಮ ಅಣ್ಣನಿಗಾಗಿ ಹೋರಾಟ ನಡೆಸುವ ಪಾತ್ರಗಳ ಬೆಳವಣಿಗೆಯು ಪ್ರೇಕ್ಷಕರಲ್ಲಿ ತೀವ್ರ ಕುತೂಹಲ ಹುಟ್ಟಿಸಿದೆ.
ಚಿತ್ರ ಬಿಡುಗಡೆ ಆದ ಮೊದಲ ದಿನದಲ್ಲೇ ಭಾರತದಲ್ಲಿ ಸುಮಾರು 15.50 ಕೋಟಿ ರೂಪಾಯಿ ಗಳಿಕೆ ಮಾಡಿದ್ದು, ಬಂಪರ್ ಓಪನಿಂಗ್ ಪಡೆದ ಚಿತ್ರವಾಗಿ ಗುರುತಿಸಿಕೊಂಡಿದೆ. ಬುಕ್ ಮೈ ಶೋನಲ್ಲಿ ಈ ಸಿನಿಮಾ 8 ರೇಟಿಂಗ್ ಪಡೆದಿದ್ದು, ಮುಂದಿನ ದಿನಗಳಲ್ಲಿ ಇದರ ಕಲೆಕ್ಷನ್ ದ್ವಿಗುಣವಾಗುವ ನಿರೀಕ್ಷೆ ಇದೆ.
‘ಸಿತಾರಾ ಎಂಟರ್‌ಟೇನ್‌ಮೆಂಟ್’ ಬ್ಯಾನರ್ ಅಡಿಯಲ್ಲಿ ನಾಗ ವಂಶಿ ನಿರ್ಮಿಸಿರುವ ಈ ಚಿತ್ರದಲ್ಲಿ ವಿಜಯ್ ದೇವರಕೊಂಡ ಜೊತೆಗೆ ಸತ್ಯದೇವ್ ಮತ್ತು ಭಾಗ್ಯಶ್ರೀ ಬೋರ್ಸೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.