ನಾಯಿ ಕಡಿತ: ರೇಬಿಸ್​ ರೋಗದಿಂದ ಬೆಂಗಳೂರಿನಲ್ಲಿ 17 ಜನರ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜಧಾನಿ ಬೆಂಗಳೂರಿನಲ್ಲಿ ರೇಬಿಸ್ ರೋಗದ ಹಾವಳಿ ನಿಂತಿಲ್ಲ. ಕಳೆದ 6 ತಿಂಗಳಲ್ಲಿ ಬೆಂಗಳೂರಿನಲ್ಲಿ 17 ಜನರು ರೇಬಿಸ್​ ರೋಗದಿಂದ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ 23 ಜನರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಕಳೆದ ವರ್ಷ ಬೆಂಗಳೂರಿನಲ್ಲಿ 17 ರೇಬಿಸ್ ಪ್ರಕರಣಗಳು ಧೃಢಪಟ್ಟಿದ್ದರೇ, ಈ ವರ್ಷ 6 ತಿಂಗಳಲ್ಲೇ 17 ಜನರು ರೇಬಿಸ್​ಗೆ ಬಲಿಯಾಗಿದ್ದು ಆತಂಕ ಹೆಚ್ಚಿಸಿದೆ. ಕಳೆದ ವರ್ಷಕ್ಕಿಂತ ಈ ವರ್ಷ ರೇಬಿಸ್​ ಪ್ರಕರಣಗಳಲ್ಲಿ ಏರಿಕೆಯಾಗಿದೆ.

ರಾಜ್ಯದಲ್ಲಿ ಕಳೆದ ಎರಡು ವರ್ಷಗಳಲ್ಲಿ 60 ಕ್ಕೂ ಹೆಚ್ಚು ಜನರು ರೇಬಿಸ್​ನಿಂದ ಸಾವಿಗೀಡಾಗಿದ್ದಾರೆ. ಬೆಂಗಳೂರು ಸೇರಿದ್ದಂತೆ ರಾಜ್ಯದಲ್ಲಿ ಜನವರಿಯಿಂದ ಇಲ್ಲಿಯವರೆಗೆ 2,60,514 ನಾಯಿ ಕಡಿತ ಪ್ರಕರಣಗಳು ವರದಿಯಾಗಿವೆ. ಈ ಒಂದೇ ವಾರದಲ್ಲಿ 10,242 ನಾಯಿ ಕಡಿತ ಪ್ರಕರಣಗಳು ವರದಿಯಾಗಿದ್ದು, ಓರ್ವರು ಮೃತಪಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!