‘ಕಾಮಿಡಿ ಕಿಲಾಡಿಗಳು’ ಶೋ ಮೂಲಕ ಜನಮನ ಗೆದ್ದಿದ್ದ ನಟ ಚಂದ್ರಶೇಖರ್ ಸಿದ್ಧಿ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

‘ಕಾಮಿಡಿ ಕಿಲಾಡಿಗಳು’ ಶೋ ಮೂಲಕ ಜನಮನ ಗೆದ್ದಿದ್ದ ನಟ ಚಂದ್ರಶೇಖರ್ ಸಿದ್ಧಿ ಅವರು ನಿಧನರಾಗಿದ್ದಾರೆ. ಯಲ್ಲಾಪುರದ ಅರಣ್ಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆ ಆಗಿದೆ. ಯಲ್ಲಾಪುರ ತಾಲೂಕಿನ ಕಟ್ಟಿಗೆ ಗ್ರಾಮದ ಅರಣ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಯಲ್ಲಾಪುರ ತಾಲೂಕಿನ ವಜ್ರಳ್ಳಿಯ ಚಿಮನಳ್ಳಿಯ ಮೂಲದವರಾದ ಚಂದ್ರಶೇಖರ ಸಿದ್ದಿ ಅವರು ಖಾಸಗಿ ವಾಹಿನಿಯಲ್ಲಿ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋನಲ್ಲಿ ಭಾಗವಹಿಸಿ ಜನಪ್ರಿಯತೆ ಗಳಿಸಿದ್ದರು. ‘ನಿನಾಸಂ’ನಲ್ಲಿ ಅಭಿನಯದ ತರಬೇತಿ ಪಡೆದಿದ್ದ ಅವರು ಕೆಲವು ಧಾರವಾಹಿಗಳಲ್ಲಿ ಕೂಡ ನಟಿಸಿದ್ದರು.

ಚಂದ್ರಶೇಖರ್ ಅವರ ಸಾವಿಗೆ ಸಂಬಂಧಿಸಿದಂತೆ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!