ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಟಾಲಿವುಡ್ ನಟಿ ರಾಧಿಕಾ ಶರತ್ ಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟಾಲಿವುಡ್‌ ಹಿರಿಯ ನಟಿ ರಾಧಿಕಾ ಶರತ್ ಕುಮಾರ್ ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಕೆಲ ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ರಾಧಿಕಾ ಅವರಿಗೆ ವೈದ್ಯಕೀಯ ಪರೀಕ್ಷೆಯಲ್ಲಿ ಡೆಂಗ್ಯೂ ಸೋಂಕು ದೃಢಪಟ್ಟಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಸ್ತುತ ವೈದ್ಯಕೀಯ ನಿಗಾದಲ್ಲಿದ್ದಾರೆ. ವೈದ್ಯರು ನೀಡಿರುವ ಮಾಹಿತಿಯ ಪ್ರಕಾರ, ಅವರ ಆರೋಗ್ಯ ಸ್ಥಿತಿ ಈಗ ಸ್ಥಿರವಾಗಿದ್ದು, ಇನ್ನೂ ಕೆಲ ದಿನಗಳು ಆಸ್ಪತ್ರೆಯಲ್ಲಿಯೇ ಇರುವಂತೆ ಸಲಹೆ ನೀಡಲಾಗಿದೆ.

ಅನಾರೋಗ್ಯದ ವಿಚಾರ ತಿಳಿಯುತ್ತಿದ್ದಂತೆ ಟಾಲಿವುಡ್‌ ಹಾಗೂ ಟಿವಿ ಲೋಕದ ಅನೇಕ ಗಣ್ಯರು ಕುಟುಂಬದ ಸದಸ್ಯರೊಂದಿಗೆ ಸಂಪರ್ಕಕ್ಕೆ ಬಂದಿದ್ದಾರೆ. ಇನ್ನೂ ರಾಧಿಕಾ ಅವರ ಕುಟುಂಬದಿಂದ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲದಿದ್ದರೂ, ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ‘ರಾಧಿಕಾ ಬೇಗ ಗುಣಮುಖರಾಗಲಿ’ ಎಂಬ ಹಾರೈಕೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಅಭಿನಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ ರಾಧಿಕಾ, ಕನ್ನಡದ ‘ಅಣ್ಣ-ತಂಗಿ’ ಸೇರಿದಂತೆ ತಮಿಳು ಹಾಗೂ ತೆಲುಗು ಭಾಷೆಯ ಹಲವಾರು ಚಿತ್ರಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಎನ್‌ಟಿಆರ್, ಎಎನ್‌ಆರ್, ಶೋಭನ್ ಬಾಬು, ಕೃಷ್ಣ ಮತ್ತು ಚಿರಂಜೀವಿ ಅವರೊಂದಿಗೆ ನಟಿಸಿದ ಚಿತ್ರಗಳು ಅವರಿಗೆ ಅಪಾರ ಜನಪ್ರಿಯತೆಯನ್ನು ತಂದಿದ್ದವು. ವಿಶೇಷವಾಗಿ ಚಿರಂಜೀವಿ ಜೊತೆಗೆ ಅಭಿನಯಿಸಿದ ಹಲವು ಚಿತ್ರಗಳು ಬಾಕ್ಸ್‌ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡು, ಅವರಿಗೂ ಫ್ಯಾನ್‌ ಫಾಲೋಯಿಂಗ್‌ ಹೆಚ್ಚಿಸಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Logged in as Ashika HD. Log out?

Please enter your comment!

error: Content is protected !!