ಹೊಸದಿಗಂತ ಡಿಜಿಟಲ್ ಡೆಸ್ಕ್;
ಅಶ್ಲೀಲ ಮೆಸೇಜ್ ಮಾಡಿದ ಕಿಡಿಗೇಡಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ಪೊಲೀಸರ ಕೆಲಸಕ್ಕೆ ನಟಿ ರಮ್ಯಾ ಧನ್ಯವಾದ ತಿಳಿಸಿದ್ದಾರೆ.
ಈ ಕುರಿತು ನಟಿ ರಮ್ಯಾ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ತಪ್ಪು ಮಾಡಿದವರು ಕಾನೂನಿನ ಕೈಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಮಹಿಳೆಯರ ಘನತೆಗೆ ಧಕ್ಕೆ ತಂದವರನ್ನು ಬಂಧಿಸುವ ಕೆಲಸ ಆಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಬೆಂಗಳೂರು ಪೊಲೀಸರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ದೂರಿನ ಮೇಲೆ ತ್ವರಿತ ಕ್ರಮ ಕೈಗೊಂಡಿದ್ದಕ್ಕಾಗಿ ನಮ್ಮ ಗೃಹ ಸಚಿವ ಡಾ. ಪರಮೇಶ್ವರ್ ಅವರಿಗೆ ಮತ್ತು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಮತ್ತು ಸಿಸಿಬಿಯ ಸಂಪೂರ್ಣ ತಂಡಕ್ಕೆ ಧನ್ಯವಾದ ಹೇಳುತ್ತೇನೆ. ಬೆಂಗಳೂರು ನಗರ ಪೊಲೀಸರು ಸ್ತ್ರೀದ್ವೇಷದ ಆಕ್ರಮಣದ ವಿರುದ್ಧ ದೃಢವಾದ ನಿಲುವನ್ನು ತೆಗೆದುಕೊಂಡಿದ್ದಾರೆ. ಕಾನೂನು ಕ್ರಮ ಕೈಗೊಳ್ಳಲಾಗಿದೆ ಮತ್ತು ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಸಂದೇಶ ಸ್ಪಷ್ಟವಾಗಿದೆ. ನಮ್ಮ ನಗರದಲ್ಲಿ ಮಹಿಳೆಯರ ಘನತೆಯನ್ನು ರಕ್ಷಿಸುವ ಮತ್ತು ಸುರಕ್ಷತೆಯನ್ನು ಖಾತ್ರಿಪಡಿಸುವ ವಿಷಯಕ್ಕೆ ಬಂದಾಗ ಕಾನೂನಿನ ಕೈಯಿಂದ ತಪ್ಪಿಸಿಕೊಳ್ಳುವುದು ಕಷ್ಟ ಎಂದು ನಟಿ ರಮ್ಯಾ ಪೋಸ್ಟ್ ಮಾಡಿದ್ದಾರೆ.