ಹೊಸದಿಗಂತ ಡಿಜಿಟಲ್ ಡೆಸ್ಕ್;
ಭಾರತವು ವಿಶ್ವದ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ. ಅದಕ್ಕಾಗಿಯೇ ಅದು ತನ್ನ ಆರ್ಥಿಕ ಹಿತಾಸಕ್ತಿಗಳಿಗೆ ಸಂಬಂಧಿಸಿದಂತೆ ಜಾಗರೂಕರಾಗಿರಬೇಕು ಎಂದು ಪ್ರಧಾನಿ ಮೋದಿ ಅವರು ವಾರಾಣಸಿಯಲ್ಲಿ ಹೇಳಿದ್ದಾರೆ
ಭಾರತವನ್ನು ಸತ್ತ ಆರ್ಥಿಕತೆ ಎಂದು ಟ್ರಂಪ್ ಟೀಕಿಸಿದ ಬೆನ್ನಲ್ಲೇ ವಾರಾಣಸಿಯಲ್ಲಿ ಮಾಡಿದ ತಮ್ಮ ಭಾಷಣದಲ್ಲಿ ಪ್ರಧಾನಿ ಮೋದಿ, ಜಗತ್ತಿನಲ್ಲಿ ಅಸ್ಥಿರತೆಯ ವಾತಾವರಣವಿದೆ. ಎಲ್ಲಾ ದೇಶಗಳು ತಮ್ಮ ವೈಯಕ್ತಿಕ ಹಿತಾಸಕ್ತಿಗಳ ಮೇಲೆ ಕೇಂದ್ರೀಕರಿಸುತ್ತಿವೆ. ಭಾರತ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ. ನಮ್ಮ ಸರ್ಕಾರವು ದೇಶದ ಹಿತದೃಷ್ಟಿಯಿಂದ ಸಾಧ್ಯವಿರುವ ಎಲ್ಲವನ್ನೂ ಮಾಡುತ್ತಿದೆ. ದೇಶಕ್ಕೆ ಒಳಿತನ್ನು ಬಯಸುವವರು ಮತ್ತು ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ನೋಡಲು ಬಯಸುವವರು ಅದು ಯಾವುದೇ ರಾಜಕೀಯ ಪಕ್ಷವಾಗಿರಲಿ ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ‘ಸ್ವದೇಶಿ’ ಉತ್ಪನ್ನಗಳ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಪ್ರಚಾರಪಡಿಸಬೇಕು ಎಂದು ಮೋದಿ ಮನವಿ ಮಾಡಿದ್ದಾರೆ.
ನಾವು ಭಾರತೀಯರು ತಯಾರಿಸಿದ ವಸ್ತುಗಳನ್ನು ಮಾತ್ರ ಖರೀದಿಸುತ್ತೇವೆ ಎಂದು ಜನರು ಸ್ಥಳೀಯರಿಗೆ ಧ್ವನಿಯಾಗಬೇಕು ಎಂದು ಪ್ರಧಾನಿ ಒತ್ತಿ ಹೇಳಿದ್ದಾರೆ.