BIG NEWS | ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಕೆಆರ್ ನಗರ ಮೂಲದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂಬುದು ಸಾಬೀತಾಗಿದ್ದು, ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ.

ಪ್ರಜ್ವಲ್ ರೇವಣ್ಣಗೆ ಜೀವಾವಧಿಶಿಕ್ಷೆ ಹಾಗೂ 5 ಲಕ್ಷ ರೂ. ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ನೀಡಿದ್ದಾರೆ.

ಐಪಿಸಿ ಸೆಕ್ಷನ್ 376(2)(k) ಅಡಿ ತೀರ್ಪು ಪ್ರಕಟಿಸಲಾಗಿದ್ದು, ಜೀವನ ಪರ್ಯಂತ ಜೈಲು ಶಿಕ್ಷೆಯನ್ನು ಪ್ರಜ್ವಲ್ ಅನುಭವಿಸಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!