ಹೊಸದಿಗಂತ ಡಿಜಿಟಲ್ ಡೆಸ್ಕ್:
ಮನೆಗೆಲಸದಾಕೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ದೋಷಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಪ್ರಜ್ವಲ್ನನ್ನು ದೋಷಿ ಎಂದು ತೀರ್ಮಾನಿಸಿ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಈ ಹಿನ್ನೆಲೆ ಅವರು ತಮ್ಮ ವಕೀಲರ ಮೂಲಕ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ.
ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನೀಡಿರುವ ಶಿಕ್ಷೆಗೆ ತಡೆ ಅಥವಾ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಬಹುದು. ಹಾಗೇ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ನೀಡುವಂತೆ ಹೈಕೋರ್ಟ್ ಮೋರೆ ಹೋಗಬಹುದು.
ಅಲ್ಲದೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ ತೀರ್ಪು ರದ್ದುಗೊಳಿಸುವಂತೆ ಅರ್ಜಿಸುವ ಅವಕಾಶ ಸಹ ಪ್ರಜ್ವಲ್ ರೇವಣ್ಣ ಮುಂದೆ ಇದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಪರ ವಕೀಲರು ಯಾವ ಹೆಜ್ಜೆ ಇಡಲಿದ್ದಾರೆ ಎನ್ನುವುದನ್ನು ಕಾದುನೋಡಬೇಕಿದೆ.