July 21, 2026
Tuesday, July 21, 2026
spot_img

ಟ್ರ್ಯಾಕ್ಟರ್ ಟ್ರಾಲಿಗೆ ಟ್ರಕ್ ಡಿಕ್ಕಿ: 8 ಜನರ ದುರ್ಮರಣ, 43 ಮಂದಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಯಾತ್ರಿಕರು ಸಾವನ್ನಪ್ಪಿದ್ದು, 43 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ನಡೆದಿದೆ.

ಅರ್ನಿಯಾ ಬೈಪಾಸ್ ಬಳಿಯ ಬುಲಂದ್‌ಶಹರ್-ಅಲಿಗಢ ಗಡಿಯಲ್ಲಿ ಸೋಮವಾರ ನಸುಕಿನ ಜಾವ 2:10ರ ಸುಮಾರಿಗೆ ಅಪಘಾತ ಸಂಭವಿಸಿದೆ.
ಕ್ಯಾಂಟರ್ ಟ್ರಕ್ ಹಿಂದಿನಿಂದ ಟ್ರ‍್ಯಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದ ಪರಿಣಾಮ ಅದು ಪಲ್ಟಿಯಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ದಿನೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

10 ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. 10 ಮಂದಿ ಗಾಯಾಳುಗಳನ್ನು ಅಲಿಘರ್ ವೈದ್ಯಕೀಯ ಕಾಲೇಜಿಗೆ, ಇನ್ನೂ 10 ಜನರನ್ನು ಬುಲಂದ್‌ಶಹರ್ ಜಿಲ್ಲಾ ಆಸ್ಪತ್ರೆಗೆ ಮತ್ತು 23 ಮಂದಿಯನ್ನು ಖುರ್ಜಾದ ಕೈಲಾಶ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !