ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯ ಜಿಲ್ಲೆಯ KRS ಡ್ಯಾಂಗೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂದು ಸಚಿವ ಹೆಚ್.ಸಿ. ಮಹದೇವಪ್ಪ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.
ಇಂದು ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಕನ್ನಂಬಾಡಿ ಕಟ್ಟೊದಕ್ಕೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ರು. ಆದರೆ ಈಗ ಅದನು ಹೇಳೋಕೆ ಯಾರಿಗೂ ಧೈರ್ಯ ಇಲ್ಲ. ಕೆ.ಆರ್.ಎಸ್. ಗೇಟ್ ಹೆಬ್ಬಾಗಿಲಿನಲ್ಲಿ ಈಗಲೂ ಅದನ್ನು ಕಾಣಬಹುದು ಎಂದು ಹೇಳಿಕೆ ನೀಡಿದ್ದಾರೆ.
ಟಿಪ್ಪು ರಣರಂಗದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ದೊಡ್ಡ ಸ್ವತಂತ್ರ ಸೇನಾನಿ. ಚರಿತ್ರೆ ಗೊತ್ತಿಲ್ಲದವರು ಚರಿತ್ರೆ ನಿರ್ಮಾಣ ಮಾಡಲು ಸಾದ್ಯವಿಲ್ಲ. ಟಿಪ್ಪು ಮಸೀದಿ ಇದೆ ಪಕ್ಕದಲ್ಲಿ ದೇವಸ್ಥಾನ ಇದೆ. ಈಕಡೆ ಅಲ್ಲ ವೋ ಅಕ್ಬರ್ ಅಂತಾರೆ, ಅಕಡೆ ಗಂಟೇ ಟನ್, ಟನ್ ಅಂತಾರೆ. ಎರಡನ್ನು ಕೇಳ್ತಿದ್ರು ಅವರು. ಸಮಚಿತ್ತರಾಗಿದ್ದವರು ಟಿಪ್ಪು. ದೇವದಾಸಿ ಪದ್ಧತಿ ರದ್ದು ಮಾಡಿದ್ರು. ಶೋಷಿತರ ಮಹಿಳೆಯರನ್ನು ದೂಡುತ್ತಿದ್ದರು. ಆ ಕಾಲದಲ್ಲೇ ದೇವದಾಸಿ ಪದ್ಧತಿ ರದ್ದು ಮಾಡಿದ್ದು ಟಿಪ್ಪು ಎಂದರು.