February 8, 2026
Sunday, February 8, 2026
spot_img

ಕಿಂಗ್ ಕೊಹ್ಲಿ ದಾಖಲೆ ಉಡೀಸ್: ಟಿ20 ಕ್ರಿಕೆಟ್‌ನ ಹೊಸ ‘ಮಹಾರಾಜ’ ಸೂರ್ಯಕುಮಾರ್ ಯಾದವ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟೀಮ್ ಇಂಡಿಯಾದ ಟಿ20 ನಾಯಕ, ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಅಟ್ಟುವ ಸೂರ್ಯಕುಮಾರ್ ಯಾದವ್ ಈಗ ಹೊಸ ಇತಿಹಾಸ ಬರೆದಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಯುಎಸ್ಎ ವಿರುದ್ಧದ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ಸೂರ್ಯ, ಆಧುನಿಕ ಕ್ರಿಕೆಟ್‌ನ ದಿಗ್ಗಜ ವಿರಾಟ್ ಕೊಹ್ಲಿ ಅವರ ಸುದೀರ್ಘ ಕಾಲದ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.

ಯುಎಸ್ಎ ವಿರುದ್ಧದ ಪಂದ್ಯದಲ್ಲಿ ಕೇವಲ 49 ಎಸೆತಗಳನ್ನು ಎದುರಿಸಿದ ಸೂರ್ಯಕುಮಾರ್, 10 ಬೌಂಡರಿ ಹಾಗೂ 4 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ ಅಜೇಯ 84 ರನ್ ಸಿಡಿಸಿದರು. ಇವರ ಈ ಸ್ಫೋಟಕ ಅರ್ಧಶತಕದ ಬಲದಿಂದ ಭಾರತ 161 ರನ್‌ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿತು. ಈ ಗುರಿಯನ್ನು ಬೆನ್ನಟ್ಟಿದ ಯುಎಸ್ಎ ತಂಡವನ್ನು 132 ರನ್‌ಗಳಿಗೆ ನಿಯಂತ್ರಿಸಿದ ಭಾರತ, 29 ರನ್‌ಗಳ ಭರ್ಜರಿ ಜಯ ದಾಖಲಿಸಿತು.

ಈ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ಸೂರ್ಯಕುಮಾರ್ ಯಾದವ್ ಅವರಿಗೆ ‘ಪಂದ್ಯ ಶ್ರೇಷ್ಠ’ ಪ್ರಶಸ್ತಿ ಒಲಿಯಿತು. ಇದು ಸೂರ್ಯ ಅವರ ವೃತ್ತಿಜೀವನದ 17ನೇ ಟಿ20 ಪಂದ್ಯ ಶ್ರೇಷ್ಠ ಪ್ರಶಸ್ತಿಯಾಗಿದೆ. ಈ ಮೂಲಕ ಅವರು ವಿರಾಟ್ ಕೊಹ್ಲಿ ಅವರ ಹೆಸರಿನಲ್ಲಿದ್ದ (16 ಪ್ರಶಸ್ತಿಗಳು) ದಾಖಲೆಯನ್ನು ಮುರಿದರು.

ಇದನ್ನೂ ಓದಿ:

ವಿಶೇಷವೆಂದರೆ, ವಿರಾಟ್ ಕೊಹ್ಲಿ 125 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರೆ, ಸೂರ್ಯಕುಮಾರ್ ಕೇವಲ 105 ಪಂದ್ಯಗಳಲ್ಲಿ ಈ ಮೈಲಿಗಲ್ಲು ತಲುಪುವ ಮೂಲಕ ಟಿ20 ಕ್ರಿಕೆಟ್‌ನಲ್ಲಿ ತಮ್ಮ ಅಧಿಪತ್ಯವನ್ನು ಸಾಬೀತುಪಡಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !