ಹೊಸದಿಗಂತ ಡಿಜಿಟಲ್ ಡೆಸ್ಕ್:
ಪತಿಯನ್ನು ಪತ್ನಿಯೇ ಕೃಷ್ಣಾ ನದಿಗೆ ತಳ್ಳಿದ ಆರೋಪ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಬಾಲ್ಯವಿವಾಹ ಪ್ರಕರಣದಲ್ಲಿ ಈಗ ಪತಿಯೇ ಬಂಧನ ಆಗಿದ್ದಾನೆ.
ಅಪ್ರಾಪ್ತೆಯನ್ನು ವಿವಾಹವಾಗಿದ್ದ ಹಿನ್ನೆಲೆಯಲ್ಲಿ ಬಾಲ್ಯವಿವಾಹ ನಿಷೇಧ ಕಾಯಿದೆ ಅಡಿ ಪ್ರಕರಣದಲ್ಲಿ ತಾತಪ್ಪ ಸಿಲುಕಿದ್ದನು. ಇದರ ಜೊತೆಗೆ 10 ಮಂದಿ ವಿರುದ್ಧವೂ ಇದೇ ಕಾಯ್ದೆ ಅಡಿ ಪ್ರಕರಣ ದಾಖಲಾಗಿತ್ತು. ಕೇಸ್ ದಾಖಲು ಆಗುತ್ತಿದ್ದಂತೆ ತಾತಪ್ಪ ನಾಪತ್ತೆ ಆಗಿದ್ದನು. ಆದರೆ ಈ ಬಗ್ಗೆ ಹುಡುಕಾಟ ನಡೆಸಿದ್ದ ಪೊಲೀಸರು ಆರೋಪಿಯನ್ನ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ರಾಯಚೂರಿನಲ್ಲಿ ತಾತಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.
ಬಾಲ್ಯ ವಿವಾಹ ಹಿನ್ನೆಲೆಯಲ್ಲಿ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೋಸಂಬೆ ಭೇಟಿ ನೀಡಿದ್ದರು. ಈ ವೇಳೆ ಶಶಿಧರ್ ಅವರು ಅಸಮಾಧಾನ ಹೊರಹಾಕಿದ್ದರು. ಸದ್ಯ ಆರೋಪಿ ತಾತಪ್ಪನನ್ನು ರಿಮ್ಸ್ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿದೆ. ನಂತರ ರಾಯಚೂರಿನ ಜಿಲ್ಲಾ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.