ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾ-ಜಾರ್ಖಂಡ್ ಗಡಿಯ ಸಂದರ್‌ಗಢ್ ಜಿಲ್ಲೆಯಲ್ಲಿ ಭಾನುವಾರ ಐಇಡಿ ಸ್ಫೋಟಗೊಂಡು ರೈಲ್ವೆ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ.
ಸ್ಫೋಟದ ಸ್ಥಳವು ಒಡಿಶಾದ ಸುಂದರ್‌ಗಢ ಜಿಲ್ಲೆಯ ಕೆ. ಬಲಂಗ್ ಪೊಲೀಸ್ ಠಾಣೆಯ ರೆಂಜ್ಡಾ ನಿಲ್ದಾಣದಿಂದ ಕೆಲವು ಕಿಲೋ ಮೀಟರ್ ದೂರದಲ್ಲಿದೆ. ಮಾವೋವಾದಿಗಳ ಭದ್ರಕೋಟೆ ಎನಿಸಿಕೊಂಡಿರುವ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ದಟ್ಟವಾದ ಸಾರಂಡಾ ಕಾಡು ಸಮೀಪದಲ್ಲೇ ಇದೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮತ್ತೋರ್ವ ಸಿಬ್ಬಂದಿ ಗಾಯಗೊಂಡಿದ್ದಾರೆ. .
ಮೃತ ಇಟುವ ಓರ್ಮನ್ ರೈಲ್ವೆಯ ಪ್ರಮುಖ ಹುದ್ದೆ ನಿಭಾಯಿಸುತ್ತಿದ್ದರು. ಸ್ಫೋಟ ನಡೆದ ಸಮೀಪದಲ್ಲೇ ಮಾವೋವಾದಿಗಳಿಗೆ ಬೆಂಬಲ ಸೂಚಿಸುವ ಪೋಸ್ಟರ್ ಲಭ್ಯವಾಗಿದೆ ಎಂದು ಅದಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಬಗ್ಗೆ ತನಿಖೆ ಆರಂಭವಾಗಿದೆ. ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ. ಗಾಯಗೊಂಡ ಸಿಬ್ಬಂದಿಯನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
10 ಲಕ್ಷ ರೂ. ಪರಿಹಾರ
ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು ಸ್ಫೋಟದಲ್ಲಿ ಮೃತಪಟ್ಟ ರೈಲ್ವೆ ಸಿಬ್ಬಂದಿಯ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ ಮತ್ತು 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ (CMRF) ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ (CMO) ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದೆ.