14 ವರ್ಷ ಮಾತ್ರ ಬದುಕಿದ್ದೇನೆ, ಅದರಲ್ಲೇ ತೃಪ್ತಿಯಿದೆ: ಡೆತ್‌ನೋಟ್‌ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಡೆತ್​ನೋಟ್ ಬರೆದಿಟ್ಟು 7ನೇ ತರಗತಿ ವಿದ್ಯಾರ್ಥಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಸಿಕೆ ಅಚ್ಚುಕಟ್ಟುವಿನಲ್ಲಿ ನಡೆದಿದೆ.

ಗಾಂಧಾರ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಬೆಳಗ್ಗೆ ತಂದೆ ಬಾಲಕನ ರೂಮ್​ಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಗಾಂಧಾರ್​ ತಂದೆ ಮ್ಯೂಸಿಕ್ ಆರ್ಟಿಸ್ಟ್ ಆಗಿ ಕೆಲಸ ಮಾಡುತ್ತಾರೆ. ತಾಯಿ ಸವಿತಾ ಜಾನಪದ ಗಾಯಕಿಯಾಗಿದ್ದಾರೆ. ಸವಿತಾ ಅವರು ಕಳೆದ ಶುಕ್ರವಾರ ಕಾರ್ಯಕ್ರಮದ ಹಿನ್ನಲೆ ಆಸ್ಟ್ರೇಲಿಯಾಗೆ ತೆರಳಿದ್ದರು. ಸದ್ಯ ತಾಯಿ ವಾಪಸ್​​ ಬರುವವರೆಗೆ ಮರಣೋತ್ತರ ಪರೀಕ್ಷೆ ನಡೆಸದೇ ಇರಲು ತಿರ್ಮಾನಿಸಲಾಗಿದೆ.

ಪ್ರೀತಿಯ ಕುಟುಂಬ ಸದಸ್ಯರೇ, ಈ ಪತ್ರ ಯಾರೆಲ್ಲ ಓದುತ್ತಿದ್ದೀರಾ ಅಳಬೇಡಿ. ಈಗಾಗಲೇ ಸ್ವರ್ಗದಲ್ಲಿದ್ದೇನೆ, ಮತ್ತೆ ನನ್ನನ್ನು ತಪ್ಪಾಗಿ ಅರ್ಥೈಸಿಕೊಳ್ಳಬೇಡಿ. ನಿಮ್ಮ ಈಗಿನ ಸ್ಥಿತಿ ಹೇಗಿದೆ ಅನ್ನೋದು ನನಗೆ ತಿಳಿದಿದೆ. ನಿಮಗೆ ನೋವಾಗುತ್ತೆ ಅನ್ನೋದು ನನಗೆ ತಿಳಿದಿದೆ.

ಈ ಮನೆ ಚೆನ್ನಾಗಿರಬೇಕೆಂದು ಈ ನಿರ್ಧಾರ ತೆಗೆದುಕೊಂಡಿದ್ದೇನೆ. ನನ್ನ ಮೇಲೆ ನಿಮಗೆ ಕೋಪ ಬರುವಂತೆ ನಡೆದುಕೊಂಡಿದ್ದೇನೆ. ನನ್ನಿಂದ ನೊಂದಿದ್ದೀರಾ, ನಿಮಗೆ ತೊಂದರೆ ಕೂಡ ನೀಡಿದ್ದೇನೆ, ಆದರೆ ನನ್ನ ಉದ್ದೇಶ ನಿಮ್ಮನ್ನು ನೋಯಿಸೋದಾಗಿರಲಿಲ್ಲ. ನನ್ನ ಮೇಲೆ ನಿಮಗೆ ಕೋಪ ಇದ್ದರೆ ನಿಮ್ಮಲ್ಲಿ ಕ್ಷಮೆ ಕೇಳುತ್ತೇನೆ. ನನ್ನ ತಪ್ಪುಗಳನ್ನು ದಯವಿಟ್ಟು ಕ್ಷಮಿಸಿ.

14 ವರ್ಷಗಳ ಕಾಲ ನಾನು ಬದುಕಿದ್ದು ಅದರಲ್ಲೇ ತೃಪ್ತನಾಗಿದ್ದೇನೆ. 14 ವರ್ಷಗಳಲ್ಲಿ ನಾನು ಖುಷಿಯ ಕ್ಷಣ ಕಳೆದಿದ್ದೇನೆ ಅದೇ ಸಾಕು. ಸ್ವರ್ಗದಲ್ಲಿ ನಾನು ಖುಷಿಯಾಗಿದ್ದೇನೆ. ನಾನು ನನ್ನ ಸ್ನೇಹಿತರನ್ನು ಪ್ರೀತಿಸುತ್ತಿದ್ದೆ ಎಂದು ಅವರಿಗೆ ತಿಳಿಸಿ. ನನ್ನ ಶಾಲಾ ಸ್ನೇಹಿತರಿಗೂ ಈ ಮಾತನ್ನ ಹೇಳಿ. ಐ ಮಿಸ್ ಯೂ ಆಲ್- ಗುಡ್​ಬೈ ಅಮ್ಮ ಎಂದು ಡೆತ್​ನೋಟ್​ ಬರೆಯಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!