ಹೊಸದಿಗಂತ ಡಿಜಿಟಲ್ ಡೆಸ್ಕ್:
ವೇತನ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಆ.5 ರಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ.
ಈ ಬೆನ್ನಲ್ಲೇ ಸಾರಿಗೆ ಇಲಾಖೆ ನೌಕರರಿಗೆ ಬಿಗ್ ವಾರ್ನಿಂಗ್ ಕೊಟ್ಟಿದೆ. ಆ.4ರಿಂದಲೇ ಅನ್ವಯವಾಗುವಂತೆ ಅನಿರ್ದಿಷ್ಟಾವಧಿವರೆಗೆ ಸಾರಿಗೆ ನೌಕರರ ರಜೆಯನ್ನ ರದ್ದುಗೊಳಿಸಿ ಸಾರಿಗೆ ಇಲಾಖೆ ಸುತ್ತೋಲೆ ಹೊರಡಿಸಿದೆ.
ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ, ಉಳಿಯದ ಯಾವುದೇ ರೀತಿಯ ರಜೆಗಳನ್ನು ಮಂಜೂರು ಮಾಡದಂತೆ ಆಯಾ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದೆ, ಅಗತ್ಯಬಿದ್ದರೆ ವಾರದ ರಜೆ ಕೂಡ ರದ್ದು ಮಾಡಲು ಅಧಿಕಾರಿಗಳಿಗೆ ಸೂಚಿಸಿದೆ. ಜೊತೆಗೆ ಇಂದಿನಿಂದಲೇ ಜಾರಿಗೆ ಬರುವಂತೆ ಮುಷ್ಕರದ ಅವಧಿಯಲ್ಲಿ ಕೆಲಸಕ್ಕೆ ಗೈರಾಗುವ ನೌಕರರ ವೇತನವನ್ನೂ ಕಡಿತಗೊಳಿಸುವುದಾಗಿ ಸುತ್ತೋಲೆಯಲ್ಲಿ ಉಲ್ಲೇಖಿಸಿದೆ.